ಹುಬ್ಬಳ್ಳಿ: ಶಾಸಕ ಜಗದೀಶ ಶೆಟ್ಟರ, ಸಂಸದ ಪ್ರಲ್ಹಾದ ಜೋಶಿ ಅಭಿಮಾನಿ ಬಳಗ ಹಾಗೂ ನವಯುಗ ಸಂಘಟನೆ ವತಿಯಿಂದ ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮವನ್ನು ಇದೇ 17ರಂದು ನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನವಯುಗ ಸಂಘಟನೆಯ ಕೃಷ್ಣಾ ಗಂಡಗಾಳೇಕರ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯೂ ಸುಮಾರು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಅಲ್ಲದೇ ನಾರಾಯಣ ಹೃದಯಾಲಯದಿಂದ ಉಚಿತ ಹೃದಯ ರೋಗ ತಪಾಸಣೆ ಶಿಬಿರವನ್ನು ಕೂಡ ಆಯೋಜಿಸಲಾಗಿದ್ದು, ಜಯಪ್ರೀಯಾ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಮಾಜಿ ಸಿಎಂ ಜಗದೀಶ ಶೆಟ್ಟರ, ಸಂಸದ ಜೋಶಿ ನೆರವೇರಿಸಲಿದ್ದಾರೆ. ಸಾನಿಧ್ಯವನ್ನು ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸಿಲಿದ್ದು, ಮುಖ್ಯ ಅತಿಥಿಗಳಾಗಿ ಪ್ರದೀಪ ಶೆಟ್ಟರ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಶಂಕರಪಾಟೀಲ ಮುನೇನಕೊಪ್ಪ ಸೇರಿದಂತೆ ಇತರರು ಆಗಮಿಸಲಿದ್ದಾರೆ ಎಂದರು. ಹೆಚ್ಚಿನ ಮಾಹಿತಿಗಾಗಿ ದೂ. 8147717812, 9449250081 ಸಂಪರ್ಕಿಸಲು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ವಸಂತ ನಾಡಜೋಶಿ, ಸುಬ್ರಹ್ಮಣ್ಯ ಶಿರಕೋಳ, ಬಸವರಾಜ ಬೆಳಗಲಿ, ನಾಗರಾಜ ಕಲಾಲ
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





