ಹುಬ್ಬಳ್ಳಿ: ಫೆ.14ರಂದು ಪ್ರೇಮಿಗಳ ದಿನಾಚರಣೆ ಹೆಸರಿನಲ್ಲಿ ಪಾರ್ಕಗಳಲ್ಲಿ ಅನೈತಿಕ ವರ್ತನೆ ಮಾಡುತ್ತಿರುವ ಯುವಕ ಯುವತಿಯರ ವಿರುದ್ಧ ಕ್ರಮ ಜಾರಿಗೊಳಿಸುವ ಮೂಲಕ ಪಾಲಕರ ಸಮ್ಮುಖದಲ್ಲಿ ಮದುವೆ ಮಾಡಿಸಲಾಗುತ್ತದೆ ಎಂದು ಕ್ರಾಂತಿಸೇನಾ ರಾಜ್ಯಾಧ್ಯಕ್ಷ ವಿಠ್ಠಲ ಪವಾರ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿ ಹೊರಡಿಸಿ ಮಾತನಾಡಿದ ಅವರು, ಇಂದಿನ ಯುವಕ ಯುವತಿಯರು ನಾಳಿನ ದೇಶದ ಭದ್ರ ಬುನಾದಿಯ ಆಧಾರಸ್ಥಂಬ ಆಗಿರಬೇಕಾದವರು ಇಂತಹ ವ್ಯಾಲೆಂಟೈನ್ ಡೇ ಹೆಸರಿನಲ್ಲಿ ಅನೈತಿಕ ಕೃತ್ಯಗಳಿಗೆ ಕೈ ಜೋಡಿಸುತ್ತಿರುವವರ ವಿರುದ್ಧ ಇಂತಹ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿ ಅನುಸರಿಸುವ ಮೂಲಕ ಭಾರತದ ಸಂಸ್ಕೃತಿ ಹಾಳು ಮಾಡುವಂತ ಯುವಕರಿಗೆ ಈ ರೀತಿ ಮದುವೆ ಮಾಡಿಸುವ ಮೂಲಕ ಎಚ್ಚರಿಕೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ಈ ಹಿಂದೆ ನಗರದ ಸಂಜೀವಿನಿ ಹಾಗೂ ನೃಪತುಂಗ ಬೆಟ್ಟದ ಪಾರ್ಕಗಳಲ್ಲಿ ಇಂತಹ ವ್ಯವಸ್ಥೆಗಳನ್ನು ನೋಡಿ ಬೇಸತ್ತು ವ್ಯಾಲೆಂಟೈನ ಡೇ ಪ್ರಯುಕ್ತವಾಗಿ ಪ್ರೇಮಿಗಳಿಗೆ ಅವರ ಪಾಲಕರ ಸಮ್ಮುಖದಲ್ಲಿಯೇ ಮದುವೆ ಮಾಡಿಸಿ ಪಾಶ್ಚಾತ್ಯ ಸಂಪ್ರದಾಯಗಳನ್ನು ನಿಯಂತ್ರಣ ತರುವ ಹಿತದೃಷ್ಟಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಮಾಂಗಲ್ಯ ಹಾಗೂ ವಸ್ತ್ರಗಳನ್ನು ತಗೆದುಕೊಂಡು ಬಂದಿದ್ದು, ಅನೈತಿಕವಾಗಿ ವರ್ತಿಸದವರಿಗೆ ಮದುವೆ ಮಾಡಿಸಲಾಗುತ್ತದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಪ್ರಭುದೇವ ಹಿಪ್ಪರಗಿ, ಓಂ ಕಾಟವೆ, ಶ್ರೀನಾಥ ಪವಾರ ಸೇರಿದಂತೆ ಇತರರು ಇದ್ದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





