ಹುಬ್ಬಳ್ಳಿ: ಬೈಕ್ ಮೇಲೆ ಬಂದು ಮೊಬೈಲ್ ಫೋನ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ನಗರದ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಧಿವಾಡ ನಿವಾಸಿ ಸಾಹಿಲ್ ಜಾ ಶೇಖ ಎಂಬಾತನೆ ಬಂಧಿತ ಆರೋಪಿ. ಮೊಬೈಲನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗಳ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದ. ಇವನ ವಿರುದ್ಧ ಕೇಶ್ವಾಪೂರ ಠಾಣೆಯಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಆರೋಪಿಯ ಬಂಧನಕ್ಕೆ ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಬಂಧಿತನಿಂದ ಒಂದು ಡಿಸ್ಕವರಿ ಬೈಕ್, ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





