ನವದೆಹಲಿ, ಫೆಬ್ರವರಿ 15: ಪುಲ್ವಾಮಾದಲ್ಲಿ ನಡೆದ ಸೈನಿಕರ ಮೇಲಿನ ದಾಳಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆಯೇ ಸಂಪುಟ ಸದಸ್ಯರ ಸಭೆ ನಡೆಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಚರ್ಚಿಸಿದರು.ಬಳಿಕ ವಂದೇ ಮಾತರಂ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಮೋದಿ, ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ವಿಡಿಯೋ: ಅತ್ಮಾಹುತಿ ದಾಳಿಗೂ ಮುನ್ನ ಜೈಷ್ ಉಗ್ರ ಆದಿಲ್ ಹೇಳಿದ್ದೇನು?ನಮ್ಮ ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರ ಧೈರ್ಯ ಸಾಮರ್ಥ್ಯದಲ್ಲಿ ನಮಗೆ ನಂಬಿಕೆ ಇದೆ ಎಂದು ಮೋದಿ ಹೇಳಿದರು.ಈ ಭಯೋತ್ಪದನಾ ಕೃತ್ಯದ ಹಿಂದೆ ಇರುವ ಶಕ್ತಿಗಳು ಮತ್ತು ಅದಕ್ಕೆ ಹೊಣೆಗಾರರಾದವರು ಖಂಡಿತವಾಗಿಯೂ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದರು.ಜೈಷ್ ಕೃತ್ಯದ ಹಿಂದೆ ಪಾಕ್ ಐಎಸ್ಐ ಕೈವಾಡದ ಶಂಕೆ : ಅಮೆರಿಕದ ತಜ್ಞರುಘಟನೆಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಸಂಘಟನೆ ಹೊತ್ತುಕೊಂಡಿದೆ. ಪಾಕಿಸ್ತಾನವು ಈ ದಾಳಿಗೂ ತನಗೂ ಸಂಬಂಧ ಇಲ್ಲ ಎಂದು ಹೇಳಿಕೊಂಡಿದೆ. ಆದರೆ, ಭಾರತವು ಪಾಕಿಸ್ತಾನವೇ ಇದಕ್ಕೆ ಮೂಲ ಹೊಣೆಗಾರ ಎಂದು ಆರೋಪಿಸಿದ್ದು, ನೆರೆ ದೇಶದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಪಾಕಿಸ್ತಾನಕ್ಕೆ ನೀಡಿದ್ದ ಅತಿ ಆಪ್ತ ದೇಶ ಎಂಬ ಸ್ಥಾನಮಾನವನ್ನು ಹಿಂದಕ್ಕೆ ಪಡೆದುಕೊಂಡಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





