Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಫೆ.19 ರಂದು ಕರ್ನಾಟಕ ಬಂದ್!

ಬೆಂಗಳೂರು, ಫೆಬ್ರವರಿ 16: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ಅಮಾನುಷ, ಆತ್ಮಾಹುತಿ ಬಾಂಬ್ ದಾಳಿ ಖಂಡಿಸಿ ಫೆ.19ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಈ ಕುರಿತು ಮಾಹಿತಿ ನೀಡಿದ್ದು, ಯೋಧರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಫೆ.19ರಂದು ಕರ್ನಾಟಕ ಬಂದ್ ಮಾಡಲಾಗುತ್ತಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‌ಗೆ ಕರೆನೀಡಲಾಗಿದೆ ಎಂದು ತಿಳಿಸಿದರು. ಪುಲ್ವಾಮಾದಲ್ಲಿ 60 ಕೆಜಿ ಆರ್‌ಡಿಎಕ್ಸ್ ತುಂಬಿದ ವಾಹನವು ಯೋಧರಿದ್ದ ಬಸ್‌ ಪಕ್ಕ ಬಂದಾಗ ಅದನ್ನು ಸ್ಫೋಟಿಸಲಾಗಿತ್ತು ಅದರಲ್ಲಿ 42 ಯೋಧರು ಹುತಾತ್ಮರಾಗಿದ್ದರು. ಯೋಧರ ಕುಟುಂಬಸ್ಥರ ಆಕ್ರಂದ ಮುಗಿಲುಮುಟ್ಟಿದೆ. 2001ರ ನಂತರ ಇದು ಎರಡನೇ ಬಹುದೊಡ್ಡ ದಾಳಿಯಾಗಿದೆ. ದಾಳಿಯಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯ ಯೋಧ ಕೂಡ ಹುತಾತ್ಮರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *