ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೈನಿಕರು ದಾಳಿಯ ಮಾಸ್ಟರ್ಮೈಂಡ್ನನ್ನೇ ಹತ್ಯೆಗೈದಿದ್ದಾರೆ. ಭಯೋತ್ಪಾದಕರ ಹೆಡೆಮುರಿಕಟ್ಟಲು ಇನ್ನೂ ಕಾರ್ಯಾಚರಣೆ ನಡೆಯುತ್ತಲೇ ಇದೆ. ಪಾಕಿಸ್ತಾನದ ಪರ ಪೋಸ್ಟ್ ಹಾಕಿದವರನ್ನೂ ಕೂಡ ಪೊಲೀಸರು ಬಂಧಿಸುತ್ತಿದ್ದಾರೆ. ಈ ಮಧ್ಯೆ ಕಾಶ್ಮೀರ ಜನರ ಪರವಾಗಿ ಪೋಸ್ಟ್ ಮಾಡಿದ್ದ ಯುವತಿಯೊಬ್ಬಳಿಗೆ ವ್ಯಕ್ತಿಯೊಬ್ಬ ಫೇಸ್ಬುಕ್ ಮೂಲಕ ಅತ್ಯಾಚಾರದ ಬೆದರಿಕೆ ಹಾಕಿದ್ದಾನೆ. ಕೊಲ್ಕತ್ತಾದ ಯುವತಿಯೊಬ್ಬಳು ತನ್ನ ಫೇಸ್ಬುಕ್ ಪೇಜ್ನಲ್ಲಿ ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಮೋದಿ ಆಡಳಿತವನ್ನ ಟೀಕಿಸಿ ಪೋಸ್ಟ್ ಮಾಡಿದ್ದಳು. ಯುವತಿಯ ಪೋಸ್ಟ್ ನೋಡಿದ ಕೆಲವರು ಆಕೆಯ ವಿರುದ್ಧ ಕಿಡಿಕಾರಿದ್ದಾರೆ. ಆದ್ರೆ, ವ್ಯಕ್ತಿಯೊಬ್ಬ ಆಕೆಗೆ ಮೆಸೇಜ್ ಮಾಡಿ ಸಾರ್ವಜನಿಕವಾಗಿ ಅತ್ಯಾಚಾರವೆಸಗುವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾಳೆ. ಅಲ್ಲದೇ ಇದೆಲ್ಲಾ ವಿಹೆಚ್ಪಿ ಹಾಗೂ ಆರ್ಎಸ್ಎಸ್ ಸಂಘಟನೆ ಕಾರ್ಯಕರ್ತರ ಕೈವಾಡ ಅಂತಾ ಆರೋಪಿಸಿದ್ದಾಳೆ .
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





