Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಚುನಾವಣಾ ಆಯೋಗದ ಆದೇಶ: ರಾಜ್ಯದಲ್ಲಿ 354 ಇನ್ಸ್​ಪೆಕ್ಟರ್​​ಗಳ ವರ್ಗಾವಣೆ.

ಬೆಂಗಳೂರು,ಫೆ.23- ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಹಿಂದೆಂದೂಕ ಕಾಣದಂತೆ ಪೊಲೀಸ್ ಇನ್‍ಸ್ಪೆಕ್ಟರ್‍ಗಳ ಭಾರೀ ವರ್ಗಾವಣೆ ಪಟ್ಟಿ ಹೊರಬಿದ್ದಿದೆ.ರಾಜ್ಯಾದ್ಯಂತ 354 ಇನ್‍ಸ್ಪೆಕ್ಟರ್‍ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಕೇಂದ್ರ ಚುನಾವಣಾ ಆಯೋಗದ ಅನುಮತಿ ಪಡೆಯಲಾಗಿದೆ ಎಂದು ವರ್ಗಾವಣೆಯ ಆದೇಶದಲ್ಲಿ ತಿಳಿಸಲಾಗಿದೆ.ಪ್ರಮುಖವಾಗಿ ಬೆಂಗಳೂರಿನ ಬಹುತೇಕ ಪೊಲೀಸ್ ಠಾಣೆಗಳ ಇನ್‍ಸ್ಪೆಕ್ಟರ್‍ಗಳು ವರ್ಗಾವಣೆಯಾಗಿದ್ದು, ಕೆಲವರು ಸಿಐಡಿ, ಗುಪ್ತಚರ ಹಾಗೂ ಬೇರೆ ಜಿಲ್ಲೆಗಳಿಗೆ ವರ್ಗಾವಣೆಗೊಂಡಿದ್ದಾರೆ.ಸಂಚಾರಿ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗಗಳಲ್ಲೂ ಇನ್‍ಸ್ಪೆಕ್ಟರ್‍ಗಳು ವರ್ಗಾವಣೆಯಾಗಿದ್ದು, ಕೂಡಲೇ ವರ್ಗಾವಣೆಗೊಂಡ ಸ್ಥಳಕ್ಕೆ ತೆರಳಿ ಕಾರ್ಯಭಾರ ಸ್ವೀಕರಿಸಬೇಕೆಂದು ಸೂಚಿಸಲಾಗಿದೆ. ಇದಕ್ಕೂ ಮುನ್ನವೇ ಇಂದು ಬೆಳಗ್ಗೆ ಕೆಲವು ನಾನ್ ಐಪಿಎಸ್ ಅಧಿಕಾರಿಗಳು ಹಾಗೂ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಬಿದ್ದಿತ್ತು.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *