ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಕೊನೆಯ ಹಾಗೂ 53ನೇ ಆವೃತ್ತಿಯ ಮನ್ ಕೀ ಬಾತ್ನಲ್ಲಿ ಮಾತನಾಡಿದರು. ಈ ವೇಳೆ ಫೆಬ್ರವರಿ 14 ರಂದು ಪುಲ್ವಾಮಾದ ಉಗ್ರರ ದಾಳಿಯನ್ನ ಪ್ರಸ್ತಾಪಿಸಿದ ಪ್ರಧಾನಿ, ‘ಈ ಬಾರಿಯ ಮನ್ ಕೀ ಬಾತ್ ಅನ್ನ ಬಾರೀ ದುಃಖದಿಂದ ಆರಂಭಿಸುತ್ತಿದ್ದೇನೆ. ಉಗ್ರರ ಪೈಶಾಚಿಕ ಕೃತ್ಯದಿಂದಾಗಿ 40 ಯೋಧರನ್ನ ಕಳೆದುಕೊಂಡಿದ್ದೇವೆ. ದಾಳಿ ನಡೆಸಿದ 100 ಗಂಟೆಯೊಳಗೆ ಉಗ್ರರಿಗೆ ತಕ್ಕ ಉತ್ತರ ನೀಡಲಾಗಿದೆ. ನಮ್ಮ ಯೋಧರಿಗೆ ನಾನು ವಂದನೆ ಸಲ್ಲಿಸುತ್ತೇನೆ. ಉಗ್ರರ ವಿರುದ್ಧ ನಮ್ಮ ಹೋರಾಟಕ್ಕೆ ಯೋಧರ ಕುಟುಂಬ ಸ್ಫೂರ್ತಿಯಾಗಿದೆ. ಭಯೋತ್ಪಾದಕರಿಗೆ ತಕ್ಕ ಉತ್ತರವನ್ನ ನಾವು ನೀಡುತ್ತಿದ್ದೇವೆ ಎಂದರು.ಪರೀಕ್ಷಾ ಕೀ ಚರ್ಚಾ ಕಾರ್ಯಕ್ರಮ ಕೂಡಾ ಆಯೋಜಿಸಿದ್ದೇನೆ. ವಿದ್ಯಾರ್ಥಿಗಳ ಜೊತೆ ಚರ್ಚೆ ಮಾಡಿದ್ದೇನೆ ಎಂದು ಪರೀಕ್ಷೆ ಬರೆಯಲು ಹೊರಡುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಲ್ಲದೇ ಆಯುಷ್ಮಾನ್ ಭಾರತ್ ಯೋಜನೆಯಿಂದ ಕೋಟ್ಯಾಂತರ ಬಡವರಿಗೆ ಅನುಕೂಲ ಆಗಿದೆ. ಬಡರೋಗಿಗಳಿಗೆ ಉಚಿತ ಚಿಕಿತ್ಸೆ ಲಭಿಸುವಂತಾಗಿದೆ ಎಂದರು. ಆಯುಷ್ಮಾನ್ ಭಾರತ್ ಯೋಜನೆಯಿಂದ ಕೋಟ್ಯಾಂತರ ಬಡವರಿಗೆ ಅನುಕೂಲ ಆಗಿದೆ. ಬಡರೋಗಿಗಳಿಗೆ ಚಿಕಿತ್ಸೆ ಲಭಿಸುವಂತಾಗಿದೆ ಎಂದರು.ಇನ್ನು ಮನ್ ಕೀ ಬಾತ್ ಕಾರ್ಯಕ್ರಮದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಮಾತನಾಡಿ, ದೇಶದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆರಂಭ ಮಾಡಿದ್ದಾರೆ. ಸಂಕಷ್ಟ ಎದುರಿಸುತ್ತಿರುವ ಅತಿ ಸಾಮಾನ್ಯ ವ್ಯಕ್ತಿಯನ್ನು ಮೋದಿ ತಲುಪುತ್ತಿದ್ದಾರೆ. ಯುವಕರು, ಮಹಿಳೆಯರು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಮೋದಿ ಪ್ರಸ್ತಾಪಿಸಿದ್ದಾರೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಈ ಮನ್ ಕಿ ಬಾತ್ ಕಾರ್ಯಕ್ರಮ ಮುಂದುವರೆಯಲಿ ಎಂದು ಹಾರೈಸುತ್ತೇನೆ ಎಂದರು
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





