Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕಲಬುರಗಿಯಲ್ಲಿಂದು ಪ್ರಧಾನಿ ಮೋದಿ ಮೆಗಾ ರ‍್ಯಾಲಿ

ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ಪಣ ತೊಟ್ಟಿರುವ ಬಿಜೆಪಿ ಕಲಬುರಗಿಯಲ್ಲಿಂದು ಮೆಗಾ ರ‍್ಯಾಲಿ ಆಯೋಜಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಮೆಗಾ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.ಈ ಹಿಂದೆ ಗಂಡು ಮೆಟ್ಟಿದ ನಾಡಿನಲ್ಲಿ ಬೃಹತ್ ರ‍್ಯಾಲಿಯಲ್ಲಿ ಮೂಲಕ ಚುನಾವಣೆ ಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಮಾತನಾಡಿ, “ಈ ಭೂಮಿ, ತ್ಯಾಗ, ಸಾಹಸ, ಶೌರ್ಯ, ಇತಿಹಾಸ, ಸಂಸ್ಕೃತಿಗೆ ಹೆಸರು. ನನಗೆ ಈ ಪುಣ್ಯ, ಪವಿತ್ರ ಭೂಮಿಗೆ ಬಂದಿದ್ದಕ್ಕೆ ರೋಮಾಂಚನವಾಗಿದೆ” ಎಂದಿದ್ದರಲ್ಲದೆ, ಕರ್ನಾಟಕದ ಮುಖ್ಯಮಂತ್ರಿಗೆ ಪ್ರತಿದಿನ ಧಮ್ಕಿಗಳು ಬರುತ್ತಿವೆ. ಆದ್ದರಿಂದ ಅಸಹಾಯಕತೆಯಿಂದ ರಾತ್ರಿಯೆಲ್ಲಾ ಅಳುತ್ತಿರುತ್ತಾರೆ ಎಂದು ವ್ಯಂಗವಾಡಿದ್ದರು.ಇದೀಗ ಇಂದು ಕಾಂಗ್ರೆಸ್ ಭದ್ರ ಕೋಟೆಯಾಗಿರುವ ಕಲಬುರುಗಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದು, ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರನ್ನು ಈ ಬಾರಿ ಶತಾಯಗತಾಯ ಸೋಲಿಸಲೇಬೇಕು. ಕ್ಷೇತ್ರದಲ್ಲಿ ಕಮಲ ಅರಳುವಂತೆ ಮಾಡಬೇಕೆಂಬ ಬಿಜೆಪಿ ಇರಾದೆಯಿಂದಾಗಿ ಈ ಕಾರ್ಯಕ್ರಮ ರಾಜಕೀಯ ಮಹತ್ವ ಪಡೆದಿದೆ. ಇದಕ್ಕೆ ಪೂರಕವಾಗಿ, ಮಲ್ಲಿಕಾರ್ಜುನ ಖರ್ಗೆ ಎದುರು ಸ್ಪರ್ಧಿಸುವ ಉದ್ದೇಶದಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಡಾ. ಉಮೇಶ ಜಾಧವ್‌ ಈ ಸಂದರ್ಭದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಕಲಬುರಗಿ ಭೇಟಿ ವೇಳೆ “ಆಯುಷ್ಮಾನ್‌ ಭಾರತ ಯೋಜನೆ” ಫಲಾನುಭವಿಗಳೊಂದಿಗೆ ಸಂವಾದ, ಬಿಪಿಸಿಎಲ್‌ ಡಿಪೋಗೆ ಭೂಮಿ ಪೂಜೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *