Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಬೆಂಗಳೂರು-ಮೈಸೂರು ನಡುವಿನ ರೈಲು ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೌಲಭ್ಯ

ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿನಲ್ಲಿ ಉಚಿತ ವೈ-ಫೈ ಸೌಲಭ್ಯ ಕಲ್ಪಿಸಲಾಗಿದ್ದು, ಇನ್ನು ಮುಂದೆ ಮೈಸೂರು-ಬೆಂಗಳೂರು ಮಾರ್ಗದ ಎಲ್ಲಾ 17 ರೈಲು ನಿಲ್ದಾಣಗಳಲ್ಲೂ ಉಚಿತ ವೈ-ಫೈ ಸೌಲಭ್ಯ ದೊರೆಯಲಿದೆ ಎಂದು ರೈಲ್ವೆ ವಿಭಾಗೀಯ ವ್ಯವಸ್ಥಾಪಕರು ತಿಳಿಸಿದ್ದಾರೆ.ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಬರುವ ಬೆಂಗಳೂರು ನಗರ ನಿಲ್ದಾಣ, ಕೆಂಗೇರಿ,ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು, ನಾಯಂಡಹಳ್ಳಿ, ಹೆಜ್ಜಾಲ,ಶೆಟ್ಟಿಹಳ್ಳಿ, ಹನಕೆರೆ, ಯಲಿಯೂರು, ಬ್ಯಾಡರಹಳ್ಳಿ,ಪಾಂಡವಪುರ, ನಾಗನಹಳ್ಳಿ ಸೇರಿ ಈ ಮಾರ್ಗದ ಎಲ್ಲಾ 17 ನಿಲ್ದಾಣಗಳಲ್ಲೂ ಉಚಿತ ವೈ-ಫೈ ಸೌಲಭ್ಯವನ್ನು ರೈಲ್ವೆ ಮಂತ್ರಾಲಯದ ರೈಲ್‌ಟೆಲ್‌ ಕಾರ್ಪೋರೆಷನ್‌ ಆಫ್ ಇಂಡಿಯಾ ಲಿ. ಒದಗಿಸಲಿದೆ ಎಂದು ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಆರ್.ಎಸ್.ಸಕ್ಸೇನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜನವರಿಯಲ್ಲಿ ಈ ಮಾರ್ಗದ ಎಲ್ಲಾ ನಿಲ್ದಾಣಗಳಲ್ಲೂ ಉಚಿತ ವೈ-ಫೈ ಸೌಲಭ್ಯ ಕಲ್ಪಿಸಿದ್ದರಿಂದ 3,16,157 ಬಳಕೆದಾರರು 1,09,757 ಟಿಬಿ ಡೇಟಾ ಬಳಸಿದ್ದಾರೆ ಎಂದು ಆರ್‌.ಎಸ್‌.ಸಕ್ಸೇನಾ ಮಾಹಿತಿ ನೀಡಿದ್ದಾರೆ.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *