Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

25ರಿಂದ ಎಬಿವಿಪಿ ವತಿಯಿಂದ ಸಿಇಟಿ ಹಾಗೂ ನೀಟ್ ಉಚಿತ ತರಬೇತಿ..

ಹುಬ್ಬಳ್ಳಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಉಚಿತ ಸಿ.ಇ.ಟಿ ಹಾಗೂ ನೀಟ್ ತರಬೇತಿ ಶಿಬಿರವನ್ನು ಇದೇ 25ರಿಂದ ಇಪ್ಪತ್ತು ದಿನಗಳ ತರಬೇತಿ ಶಿಬಿರವನ್ನು ಹುಬ್ಬಳ್ಳಿಯ ಕಲ್ಯಾಣ ನಗರದಲ್ಲಿರುವ ಎಬಿವಿಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಬಿವಿಪಿ ರಾಜ್ಯ ಉಪಾಧ್ಯಕ್ಷ ಡಾ.ವಿರೇಶ ಬಾಳಿಕಾಯಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಮಾರು ವರ್ಷಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಲ್ಲದೇ ದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಹೋರಾಟಕ್ಕೆ ಸದಾ ಮುಂಚೂಣಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಶೈಕ್ಷಣಿಕ ಅವಕಾಶವನ್ನು ಒದಗಿಸುವಲ್ಲಿ ಹಾಗೂ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಸದುದ್ದೇಶದಿಂದ ಸಿಇಟಿ ಹಾಗೂ ನೀಟ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು‌. ಉಚಿತ ತರಬೇತಿ ಶಿಬಿರದಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಷಯಗಳನ್ನು ಪ್ರಥಮ ಹಾಗೂ ದ್ವೀತಿಯ ವರ್ಷದ ಪಠ್ಯಕ್ರಮ ಆಧರಿಸಿ ಭೋದನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಈಗಾಗಲೇ ನೋಂದಣಿ ಪ್ರಾರಂಭಗೊಂಡಿದ್ದು, ಆಸಕ್ತ ವಿದ್ಯಾರ್ಥಿಗಳು ಕಲ್ಯಾಣ ನಗರದಲ್ಲಿರುವ ಕಚೇರಿಗೆ ಬೇಟಿ ನೀಡಿ ನೋಂದಣಿ ಮಾಡಿಸಬೇಕು ಎಂದರು. ಅದೇರೀತಿ ಧಾರವಾಡದಲ್ಲಿ ಇದೇ 21ರಿಂದ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಕಾರ್ಯಸಮಿತಿ ಸದಸ್ಯ ವಿನಯಗೌಡ, ಪ್ರದೀಪಗೌಡ ಶಿರಕೋಳ ಇದ್ದರು.

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *