ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ ಬಳಿಕ ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವದೆಹಲಿಯಲ್ಲಿಂದು ತಿಳಿಸಿದರು.ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಲೋಕಸಭಾ ಚುನಾವಣಾ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚಿಸಲು ನವದೆಹಲಿಗೆ ಆಗಮಿಸಿದ್ದೇನೆ. ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖಂಡರೊಂದಿಗೆ ಚರ್ಚಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.ಹಾಲಿ ಸಂಸದರಿಗೆ ಸೀಟು ನೀಡುವ ಬಗ್ಗೆ ಶಾ ನಿರ್ಧರಿಸಲಿದ್ದಾರೆ:ಹಾಲಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕೆಂಬ ಸಲಹೆಯನ್ನು ಪಕ್ಷದ ಕಾರ್ಯಕರ್ತರು ನೀಡಿದ್ದಾರೆ. ಆದರೆ ಹಾಲಿ ಸಂಸದರಿಗೆ ಸೀಟು ನೀಡುವ ಬಗ್ಗೆ ಅಮಿತ್ ಶಾ ನಿರ್ಧರಿಸಲಿದ್ದಾರೆ. ಹಾಲಿ ಅಭ್ಯರ್ಥಿಗಳ ಕ್ಷೇತ್ರಗಳನ್ನು ಹೊರತುಪಡಿಸಿದರೆ ಉಳಿದಿರುವ ಕ್ಷೇತ್ರಗಳಲ್ಲಿ ಹೆಚ್ಚಿನ ಆಕಾಂಕ್ಷಿಗಳಿದ್ದಾರೆ ಎಂದು ಬಿ ಎಸ್ ವೈ ತಿಳಿಸಿದರು.ಅಗೌರವ ಶೋಭೆ ತರಲ್ಲ;ಇದೇ ವೇಳೆ ದಿವಂಗತ ಅಂಬರೀಶ್ ಅವರ ಬಗ್ಗೆ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಅಂಬರೀಷ್ ಮೃತ ಪಟ್ಟವೇಳೆ ಗೌರವ ತೋರಿದ್ದ ಕುಮಾರಸ್ವಾಮಿ ಈಗ ಅಗೌರವದಿಂದ ಮಾತಾನಾಡುವುದು ಶೋಭೆ ತರುವುದಿಲ್ಲ ಎಂದರು.ನಾವು ಸುಮಲತಾರನ್ನು ಸಂಪರ್ಕಿಸಿಲ್ಲ:ನಮ್ಮ ಪಕ್ಷದಿಂದ ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ. ಅಂಬರೀಶ್ ಅವರ ಪತ್ನಿ ಸುಮಲತಾ ಬಿಜೆಪಿಗೆ ಸೇರ್ಪಡೆ ಕುರಿತಂತೆ ಮಾತನಾಡಿದ ಯಡಿಯೂರಪ್ಪ, ಅವರ ಜೊತೆ ನಾನಾಗಲಿ, ಪಕ್ಷದ ಮುಖಂಡರಾಗಲಿ ಈವರೆಗೂ ಚರ್ಚೆ ನಡೆಸಿಲ್ಲ. ಹಾಗೆಯೇ ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆಯೂ ಯಾವುದೇ ಚರ್ಚೆ ನಡೆಸಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





