ಹುಬ್ಬಳ್ಳಿ,ಮಾ.೦೯-* ನ್ಯಾಯಾಧೀಕರಣದ ತೀರ್ಪಿನನ್ವಯ ಮಹದಾಯಿ ನೀರನ್ನು ಮಲಪ್ರಭೆಗೆ ಹರಿಸಲು ಕೇಂದ್ರ ಸರಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಅಪೂರ್ಣಗೊಂಡ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಧರಣಿ ಸತ್ಯಾಗ್ರಹ ನಡೆಸಿತು.ಈ ವೇಳೆ ಮಲಪ್ರಭೆಗೆ ಮಹದಾಯಿ ನೀರು ಹರಿಸುವುದು ಯಾವಾಗ, ಯೋಜನೆ ಜಾರಿಗೆ ನಿಷ್ಕಾಳಜಿ ಯಾಕೆ, ಕುಡಿಯುವ ನೀರಿಗಾಗಿ ಯಾಕಿಷ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ರಾಜ್ಯದ ಜನಪ್ರತಿನಿಧಿಗಳು, ಸಂಸದರು ನ್ಯಾಯಧೀಕರಣದ ತೀರ್ಪಿನನ್ವಯ ಕೇಂದ್ರ ಸರ್ಕಾರದಿಂದ ಕೂಡಲೇ ಅಧಿಸೂಚನೆ ಹೊರಡಿಸಲು ಮತ್ತು ಅರಣ್ಯ, ಪರಿಸರ ಇಲಾಖೆಯ ಅನುಮತಿಗೆ ಯಾಕೆ ಪ್ರಯತ್ನಿಸುತ್ತಿಲ್ಲ. ಅಪೂರ್ಣಗೊಂಡ ಕಳಸಾಬಂಡೂರಿ ಕಳಸಾ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಮಗಾರಿಯನ್ನು ಪ್ರಾರಂಭಿಸಲು ಇರುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲು ನಿಚ್ಛ ರಾಜಕಾರಣ ದೂರವಿಟ್ಟು ಮಲಪ್ರಭೆಗೆ ನೀರು ಹರಿಸುವ ಕೆಲಸ ಮಾಡಬೇಕು. ಈ ಮೂಲಕ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಒಕ್ಕೂಟ ಸದಸ್ಯರು, ಪದಾಧಿಕಾರಿಗಳು, ರೈತರು ಮುಂತಾದವರು ಇದ್ದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news




