ನವದೆಹಲಿ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ವ್ಯಾನಿಟಿ ಬ್ಯಾಗ್ ಕದ್ದು ಎಸ್ಕೇಪ್ ಆದ ಘಟನೆ ದೆಹಲಿಯ ಜನಕ್‌ಪುರಿ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ 4 ಗಂಟೆ ಸುಮಾರಿಗೆ ಪೊಲೀಸ್ ಬೂತ್ ಮುಂದೆಯೇ ಈ ಘಟನೆ ನಡೆದಿದೆ. ರಸ್ತೆ ಪಕ್ಕ ಮಹಿಳೆಯನ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಆಕೆಯ ಬ್ಯಾಗ್ ಎಗರಿಸಲು ಯತ್ನಿಸಿದ್ದಾರೆ. ಬ್ಯಾಗ್ ಕಸಿದುಕೊಳ್ಳುತ್ತಿದ್ದಂತೆ ಮಹಿಳೆ ಅದನ್ನ ಬಿಗಿಯಾಗಿ ಹಿಡಿದುಕೊಂಡು ಕಾಪಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದ್ರೆ ಇದನ್ನು ಲೆಕ್ಕಿಸದೆ ದುಷ್ಕರ್ಮಿಗಳು ಬೈಕ್ ಜತೆಗೆ ಮಹಿಳೆಯನ್ನು 25 ಮೀಟರ್ ದೂರ ಎಳೆದುಕೊಂಡು ಹೋಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆ ಬ್ಯಾಗ್‌ನಲ್ಲಿದ್ದ 25,000 ರೂ. ಹಣ ಸೇರಿದಂತೆ ಕೆಲ ಪ್ರಮುಖ ದಾಖಲೆಗಳನ್ನು ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆ. ದರೋಡೆಕೋರರು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆಯಾಗಿಲ್ಲ. ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





