ಹಾಸನ: ಕೆಎಸ್ಆರ್ಟಿಸಿ ಬಸ್ ಮತ್ತು ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಸೀಕೆರೆ ತಾಲೂಕಿನ ಲಕ್ಷೀದೇವರಹಳ್ಳಿಯಲ್ಲಿ ನಿನ್ನೆ ತಡರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದೆ. ಮುಜೀಬಾ(53) ಪುತ್ರ ಮಹಮದ್ ಸಾಧಿಖ್(22) ಹಾಗೂ ಮಗಳು ಮುಸ್ಕಾನ್(19) ಮೃತ ದುರ್ದೈವಿಗಳು. ಗಾಯಾಳುಗಳನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





