ನ್ಯೂಜಿಲ್ಯಾಂಡ್ನ ಕ್ರೈಸ್ಟ್ಚರ್ಚ್ ನಗರದಲ್ಲಿರೋ ಎರಡು ಮಸೀದಿಗಳಲ್ಲಿ ನಿನ್ನೆ ಭಕ್ತರ ಮೇಲೆ ಗುಂಡಿನ ದಾಳಿ ನಡೆದಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. ಮಿಲಿಟರಿ ಸ್ಟೈಲ್ ಬಟ್ಟೆ ಧರಿಸಿ, ಆಟೋಮ್ಯಾಟಿಕ್ ರೈಫಲ್ ಹಿಡಿದು ಬಂದಿದ್ದ ವ್ಯಕ್ತಿ ಅಲ್ ನೂರ್ ಮಸೀದಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಾರ್ಥನೆಗಾಗಿ ಮಸೀದಿಗೆ ಆಗಮಿಸುತ್ತಿತ್ತು. ಸದ್ಯ ತಂಡದ ಎಲ್ಲಾ ಸದಸ್ಯರು ಸುರಕ್ಷಿತವಾಗಿದ್ದಾರೆ ಎಂದು ಟೀಮ್ ಕೋಚ್ ಹೇಳಿದ್ದಾರೆ. ಸದ್ಯ ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನ್ಯೂಜಿಲ್ಯಾಂಡ್ನ ಜನರಿಗೆ ಮಸೀದಿಗಳಿಗೆ ಹೋಗದಂತೆ ಪೊಲೀಸರು ಸೂಚಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





