ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಸಂಜೆ 06:40ಕ್ಕೆ ನಿಧನರಾದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಸಂಜೆ 06:40ಕ್ಕೆ ವಿಧಿವಶರಾಗಿದ್ದು, ಇಂದು ಸಂಜೆ ಮಿರಾಮಾರಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿಜೆಪಿ ವಕ್ತಾರರು ಮಾಹಿತಿ ನೀಡಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಮತ್ತು ಮಾಜಿ ರಕ್ಷಣಾ ಸಚಿವ ಪರಿಕರ್ (63) ಅವರು ಫೆಬ್ರವರಿ 2018 ರಿಂದ ಪ್ಯಾಂಕ್ರಿಯಾಟಿಕ್ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕನ ಆರೋಗ್ಯ ಕಳೆದೆರಡು ದಿನಗಳಿಂದ ತೀವ್ರ ಹದಗೆಟ್ಟಿತ್ತು.ಶನಿವಾರ ಬೆಳಿಗ್ಗೆ ರಕ್ತದೊತ್ತಡ ಏರುಪೇರಾಗಿತ್ತು, ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿತ್ತು. ಆದರೆ ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರಿಗೆ ಜೀವರಕ್ಷಕ ಸಾಧನಗಳ ನೆರವು ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮನೋಹರ್ ಪರಿಕ್ಕರ್ ಭಾನುವಾರ ಸಂಜೆ 06:40ಕ್ಕೆ ನಿಧನರಾದರು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಬೆಳಿಗ್ಗೆ 9:00 ರಿಂದ 10:30ರವರೆಗೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇರಿಸಲಾಗುವುದು. ಬಳಿಕ ಸಂಜೆ 4 ಗಂಟೆವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಪರಿಕ್ಕರ್ ಅವರ ಅಂತಿಮ ಯಾತ್ರೆ ಮೆರವಣಿಗೆ ಮೂಲಕ ನಡೆಯಲಿದ್ದು, ಸಂಜೆ 5 ಗಂಟೆಗೆ ಪಣಜಿಯಲ್ಲಿರುವ ಮೀರಾಮಾರ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





