ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ದೇಶಾದ್ಯಂತ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸ್ತಿವೆ. ಇದರ ಜೊತೆ ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಖಡಕ್ ನೀತಿ ಸಂಹಿತೆ ಕೂಡಾ ಜಾರಿಯಲ್ಲಿದೆ. ಇದರೊಂದಿಗೆ ಸೋಷಿಯಲ್ ಮೀಡಿಯಾಗಳ ಮೇಲೂ ಚುನಾವಣಾ ಆಯೋಗ ಕೆಲವು ನಿಯಮಗಳನ್ನು ಹೇರಿದೆ.ಜಾಲತಾಣಗಳ ಮೇಲೆ ಚುನಾವಣಾ ಆಯೋಗದ ಕಣ್ಣು..!ಲೋಕಸಭಾ ಚುನಾವಣೆ ಮುಕ್ತಾಯಕ್ಕೂ 48 ಗಂಟೆಗಳ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ಪರ ರಾಜಕೀಯ ಪ್ರಚಾರಕ್ಕೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಸೋಷಿಯಲ್ ಮೀಡಿಯಾಗಳಾದ ಫೇಸ್‌ಬುಕ್, ವಾಟ್ಸಪ್, ಟ್ವಿಟರ್, ಗೂಗಲ್, ಟಿಕ್‌ಟಾಕ್ ಸೇರಿದಂತೆ ಪ್ರಮುಖ ಜಾಲತಾಣಗಳಲ್ಲಿ ಪ್ರಚಾರನ್ನು ನಿಷೇಧಿಸಿದೆ. ನೀತಿ ಸಂಹಿತೆ ಬಗ್ಗೆ ನಿನ್ನೆ ಚುನಾವಣಾ ಆಯೋಗ, ಅಂತರ್ಜಾಲ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಪ್ರಮುಖ ಸಾಮಾಜಿಕ ಜಾಲತಾಣಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿತು. ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಂತಹ ಯಾವುದೇ ರೀತಿಯ ಪ್ರಕರಣಗಳು ಕಂಡು ಬಂದರೆ ಸಾಮಾಜಿಕ ಜಾಲತಾಣಗಳ ಸಂಸ್ಥೆಗಳು ಶೀಘ್ರವೇ ಕ್ರಮ ಕೈಗೊಳ್ಳಬೇಕು. ಅಲ್ಲದೇ ಕಾನೂನು ಉಲ್ಲಂಘನೆ ಬಗ್ಗೆ ನೋಡಲ್ ಆಫೀಸರ್ ವರದಿ ಬಳಿಕ ಸ್ವಯಂ ಪ್ರೇರಿತ ಕಾನೂನಿನ ಅಡಿಯಲ್ಲಿ ಜಾಲತಾಣ ಸಂಸ್ಥೆಗಳು ಕ್ರಮವನ್ನು ಜರುಗಿಸುವಂತೆ ಸೂಚಿಸಲಾಗಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





