ಬೆಂಗಳೂರು: ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಏಪ್ರಿಲ್ 4 ರವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ರಾಜ್ಯದ ಸುಮಾರು 2 ಸಾವಿರದ 800ಕ್ಕೂ ಅಧಿಕ ಪರೀಕ್ಷಾ ಕೇಂದ್ರದಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 9.30ರಿಂದ ಪರೀಕ್ಷೆ ಆರಂಭವಾಗಲಿದ್ದು, ಮೊದಲ ದಿನವಾದ ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದೆ.ಮೊಬೈಲ್, ಸ್ಮಾರ್ಟ್ಪೋನ್, ಸ್ಮಾರ್ಟ್ ವಾಚ್ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾಗಳ ಕಣ್ಗಾವಲು ಇರಿಸಲಾಗಿದೆ. ಇನ್ನು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ಬಸ್ ಪಾಸ್ ಅವಧಿಯನ್ನು ವಿಸ್ತರಿಸಿವೆ. ಎಸ್ಎಸ್ಎಲ್ಸಿ ಎಕ್ಸಾಂ ಮುಗಿರುವರೆಗೂ ಹಳೆಯ ಪಾಸ್ ಅನ್ನೇ ಬಳಸಲು ಅವಕಾಶ ಮಾಡಿಕೊಟ್ಟಿವೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





