Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕಮಲ್​ ಹಾಸನ್​ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ..

ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ಕಮಲ್​ ಹಾಸನ್​ ಅವರು ತಮ್ಮ ಮಕ್ಕಳ್​ ನಿಧಿ ಮೈಯ್ಯಂ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸ್ಪರ್ಧಿಸುವ 21 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಆದ್ರೆ ಈ ಪಟ್ಟಿಯಲ್ಲಿ ಕಮಲ್​ ಹಾಸನ್​ ಹೆಸರಲಿಲ್ಲ. ಇನ್ನುಳಿದ 19 ಸ್ಥಾನಗಳಿಗೆ 2ನೇ ಪಟ್ಟಿ ಮಾರ್ಚ್​ 24 ಭಾನುವಾರ ಕೊಯಮತ್ತೂರಿನಲ್ಲಿ ಬಿಡುಗಡೆಯಾಗಲಿದೆ. ಇನ್ನು ತಾವು ಚುನಾವಣೆಯಲ್ಲಿ ಸ್ಪರ್ಧಿಸೋ ವಿಚಾರವಾಗಿ ಪ್ರತಿಕ್ರಿಯಿಸಿದ ಕಮಲ್​, ನಾನು ಸ್ಪರ್ಧಿಸಲು ಬಯಸುತ್ತೇನೆ ಆದ್ರೆ, ಇದರ ಬಗ್ಗೆ ನನ್ನ ಪಕ್ಷದ ಕಾರ್ಯಕರ್ತರು ತೀರ್ಮಾನ ತೆಗೆದುಕೊಳ್ಳಲಿದ್ದು, ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಲಿದೆಯೇ ಇಲ್ಲವೇ ಎಂಬುದನ್ನು ತಿಳಿಯಲು ಭಾನುವಾರದವರೆಗೂ ಕಾಯುವಂತೆ ತಿಳಿಸಿದ್ದಾರೆ. ಮಕ್ಕಳ್ ನೀದಿ ಮೈಯ್ಯಂ ಬಿಡುಗಡೆ ಮಾಡಿರುವ ಲೋಕಸಭೆ ಅಭ್ಯರ್ಥಿಗಳ ಇಪ್ಪತ್ತೊಂದು ಹೆಸರಿನಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಮೌರ್ಯ ಉತ್ತರ ಚೆನೈನಿಂದ ಸ್ಪರ್ಧಿಸಲಿದ್ದಾರೆ. ಇನ್ನೂ ಏಕೈಕ ಮಹಿಳಾ ಅಭ್ಯರ್ಥಿಯಾಗಿ ನಟ ನಸ್ಸೇರ್ ಅವರ ಪತ್ನಿ , ಕಮೀಲಾ ನಸ್ಸೇರ್ ಚೆನೈ ಸೆಂಟ್ರಲ್​ನಿಂದ ಸ್ಪರ್ಧಿಸಲಿದ್ದಾರೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *