Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕಟ್ಟಡ ದುರಂತ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಧಾರವಾಡ: ಕಟ್ಟಡ ದುರಂತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಇಂದು ಕೂಡ ರಕ್ಷಣಾಕಾರ್ಯ ಮುಂದುವರಿದಿದ್ದು, ಇಬ್ಬರ ಶವವನ್ನ ಹೊರಕ್ಕೆ ತರಲಾಗಿದೆ. ಅದರಲ್ಲಿ 8 ವರ್ಷದ ದಿವ್ಯಾ ಎಂಬ ಬಾಲಕಿ ಹಾಗೂ ಮತ್ತೋರ್ವ ಮಹಿಳೆಯ ಮೃತದೇಹವನ್ನ ಹೊರಕ್ಕೆ ತರಲಾಗಿದೆ. ಮಹಿಳೆ ಮೇಲೆ ಕಟ್ಟಡದ ಫಿಲ್ಲರ್​​ ಬಿದ್ದು ಕಾರಣ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.ಮಾ. 19ರಂದು ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಸಂಪೂರ್ಣ ನೆಲಸಮವಾಗಿತ್ತು. ಕಟ್ಟಡದ ಅವಶೇಷಗಳ ಅಡಿಯಿಂದ ಒಟ್ಟು 61 ಜನರನ್ನ ರಕ್ಷಣೆ ಮಾಡಲಾಗಿದೆ. 9 ಜನ ಮೃತಪಟ್ಟಿದ್ದಾರೆ. ದೆಹಲಿಯ ಎನ್​ಡಿಆರ್​​​ಎಫ್​​​ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈ ಕಟ್ಟಡದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಯ ದೂರದ ಸಂಬಂಧಿ ಗಂಗಪ್ಪ ಶಿಂತ್ರೆ ಅವರು ಪಾಲುದಾರಿಕೆಯನ್ನ ಹೊಂದಿದ್ದಾರೆ ಎಂದು ತಿಳಿದು ಬಂದಿದ್ದು, ದೂರು ದಾಖಲಾಗಿದೆ.

Share News

About Shaikh BIG TV NEWS, Hubballi

Check Also

Featured Video Play Icon

ವಿಮಾನ ನಿಲ್ದಾಣದಲ್ಲಿ ಹೆಚ್ಚಿದ ಭದ್ರತೆ: ಪ್ರಯಾಣಿಕರ ತಪಾಸಣೆಗೆ ಆದ್ಯತೆ..!

ಹುಬ್ಬಳ್ಳಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಸ್ಫೋಟ ಘಟನೆಯ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಬ್ಯೂರೊ ಆಫ್ ಸಿವಿಲ್ …

Leave a Reply

Your email address will not be published. Required fields are marked *