ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಖಾಸಗಿ ಕಾರ್ಯಕ್ರಮಕ್ಕೆಂದು ಶುಕ್ರವಾರ ಹುಬ್ಬಳ್ಳಿಗೆ ತೆರಳಿದ್ದ ಅವರಿಗೆ ಹೃದಯಾಘಾತ ಉಂಟಾಗಿದೆ. ಕೂಡಲೇ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ಕಳೆದ ತಿಂಗಳು ವಿಷಾಹಾರ ಸೇವನೆಯಿಂದಾಗಿ ಅವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.56 ವರ್ಷದ ಶಿವಳ್ಳಿ 1999ರಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು. ದಿ. ಎಸ್. ಬಂಗಾರಪ್ಪ ಅವರ ಬೆಂಬಲಿಗರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ 3 ಬಾರಿ ಸೋಲು ಹಾಗೂ 3 ಬಾರಿ ಗೆಲುವು ಕಂಡಿದ್ದಾರೆ. 2 ಬಾರಿ ಪಕ್ಷೇತರರಾಗಿಯೂ ಚುನಾವಣೆ ಕಣಕ್ಕೆ ಇಳಿದಿದ್ದರು. 1999, 2013, 2018ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿರುವ ಅವರು ರೈತ ಪರ ಹೋರಾಟದ ಮೂಲಕ ಸಾರ್ವಜನಿಕ ಬದುಕಿಗೆ ಬಂದವರು. ನವಲಗುಂದ ತಾಲೂಕಿನ ಶೆಲವಡಿ ಗ್ರಾಮದಲ್ಲಿ ಜನಿಸಿರುವ ಅವರು ಕುಂದಗೋಳ ತಾಲೂಕು ಯರಗುಪ್ಪಿಯವರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





