Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ..?

ಹುಬ್ಬಳ್ಳಿ. ಮಾರ್ಚ್ 22: ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಹೃದಾಯಾಘಾತಕ್ಕೆ ಒಳಗಾಗಿದ್ದ ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿಗೆ ತೀವ್ರ ಹೃದಯಾಘಾತಧಾರವಾಡದ ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಶಿವಳ್ಳಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕಳೆದ ತಿಂಗಳ ಆರಂಭದಲ್ಲಷ್ಟೇ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಬಳಿಕ ಚೇತರಿಸಿಕೊಂಡು ಸರ್ಕಾರದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು.ಫೆಬ್ರವರಿ 3ರಂದು ಹುಬ್ಬಳ್ಳಿಯ ಕರಡಿಕೊಪ್ಪ ಗ್ರಾಮದಲ್ಲಿ ಕೆಲಸ ಮುಗಿಸಿಕೊಂಡು ಮರಳುವ ಸಂದರ್ಭದಲ್ಲಿ ಅವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಒಮ್ಮೆ ಗೆದ್ದ ಶಾಸಕ ಸತತವಾಗಿ ಮತ್ತೆ ಆಯ್ಕೆಯಾದ ದಾಖಲೆಯೇ ಇಲ್ಲದ ಕುಂದಗೋಳ ಕ್ಷೇತ್ರದಲ್ಲಿ ಸತತ ಎರಡು ಬಾರಿ ಬಾರಿ ಗೆದ್ದು ಶಿವಳ್ಳಿ ಇತಿಹಾಸ ಸೃಷ್ಟಿಸಿದ್ದರು.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *