Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಮೇ.1 ರಿಂದ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮ ಕಡ್ಡಾಯ…

ಬೆಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಮೇ. 1 ರಿಂದ ಜಾರಿಗೆ ಬರುವಂತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.ಸರ್ಕಾರಿ ಕಚೇರಿಗಳಲ್ಲಿ ನೌಕರರು ಸರಿಯಾದ ಸಮಯಕ್ಕೆ ಬರುವುದಿಲ್ಲ. ಕೆಲ ನೌಕರರು ಕೆಲಸಕ್ಕೆ ತಡವಾಗಿ ಆಗಮಿಸಿ, ಬೇಗ ಕಚೇರಿಯಿಂದ ಹೋಗುತ್ತಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.2013 ರಲ್ಲೇ ಸರ್ಕಾರ ಈ ನಿಯಮವನ್ನು ಜಾರಿಗೆ ತಂದಿದೆಯಾದರೂ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ. ಹಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಸಾಧನ ಅಳವಡಿಸಿಲ್ಲ. ಈ ಎಲ್ಲಾ ಲೋಪದೋಷಗಳನ್ನೂ ಸರಿಪಡಿಸಿ ಮೇ. 1 ರಿಂದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಕಾರ್ಯಗತಗೊಳಿಸುವಂತೆ ಸರ್ಕಾರ ಆದೇಶಿಸಿದೆ.ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಅಳವಡಿಸುವುದರಿಂದ ಎಲ್ಲಾ ಸರ್ಕಾರಿ ನೌಕರರು ತಪ್ಪದೇ ಬಯೋಮೆಟ್ರಿಕ್ ಬಳಸಬೇಕಾಗುತ್ತದೆ. ಇದರಿಂದ ನೌಕರರು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವುದಲ್ಲದೆ, ಸರ್ಕಾರಿ ಕೆಲಸಗಳು ಚುರುಕುಗೊಳ್ಳುತ್ತವೆ.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಜೊತೆ ಶಾಸಕನ ಬರ್ತ್‌ಡೇ ಸಂಭ್ರಮ..!ಕಳೆದ ವರ್ಷ ಪಿಐ ಸಸ್ಪೆಂಡ್… ಈ ವರ್ಷ ಶಾಸಕರ ಎಂಟ್ರಿಗೆ ಭಾರೀ ವಿವಾದ..!

ರೌಡಿಶೀಟರ್ ಜೊತೆ ಬಿಜೆಪಿ ಶಾಸಕ..!ಪಿಐಗೆ ಅಮಾನತು… ಶಾಸಕರ ಭೇಟಿ ವೈರಲ್..! ಬೆಂಗಳೂರು: ಕಳೆದ ವರ್ಷ ಇದೇ ರೌಡಿಶೀಟರ್‌ನ ಹುಟ್ಟುಹಬ್ಬದ ಸಂಭ್ರಮದಲ್ಲಿ …

Leave a Reply

Your email address will not be published. Required fields are marked *