ಮೀರತ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ರೋಗಿಯ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ಭಾನುವಾರ ನಡೆದಿದೆ.ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿನ ಸಿಬ್ಬಂದಿಯೇ ಆಕೆಯ ಮೇಲೆ ಭಾನುವಾರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ನಾಲ್ವರು ಪುರುಷರು, ಓರ್ವ ಮಹಿಳೆ ಇದ್ದು ಪ್ರಕರಣದಲ್ಲಿ ಅವರ ಪಾತ್ರವೇನು ಎಂಬುದನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೋಲಿಸ್ ಅಧಿಕಾರ ಹರಿಮೋಹನ್ ಎಎನ್ಐಗೆ ತಿಳಿಸಿದ್ದಾರೆ.ಉಸಿರಾಟದ ಸಮಸ್ಯೆಯಿದ್ದ ಪತ್ನಿಯನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಆಕೆಗೆ ಜ್ಞಾನ ತಪ್ಪಿಸುವ ಇಂಜೆಕ್ಷನ್ ನೀಡಿ ಆಸ್ಪತ್ರೆಯ ಮೂವರು ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಪತಿ ಆರೋಪಿಸಿದ್ದಾರೆ.ಅಲ್ಲದೆ, ಈ ಘಟನೆ ಸಮಯದಲ್ಲಿ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿದೆ ಎಂದು ತನಿಖಾ ಅಧಿಕಾರಿಯೊಬ್ಬರು ಎಎನ್ಐಗೆ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





