ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಇಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪದ್ಮನಾಭನಗರ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದೆ.ಸಂಜೆ 6 ಗಂಟೆಗೆ ಆರಂಭವಾಗಲಿರುವ ರೋಡ್ ಶೋನಲ್ಲಿ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ಆರ್.ಅಶೋಕ್, ವಿ.ಸೋಮಣ್ಣ, ಸತೀಶ್ ರೆಡ್ಡಿ, ರವಿಸುಬ್ರಮಣ್ಯ, ಉದಯ್ ಗರುಡಾಚಾರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಅಮಿತ್ ಶಾಗೆ ಸಾಥ್ ನೀಡಲಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





