ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲಿದೆ.ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.ಪ್ರಣಾಳಿಕೆಯು ಕೇವಲ ಒಂದು ವ್ಯಕ್ತಿಯ ದೃಷ್ಟಿಕೋನವಲ್ಲ, ಅದು ಜನರ ಧ್ವನಿಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಉದ್ಯೋಗ ಸೃಷ್ಟಿ ಬಗ್ಗೆ ಹೆಚ್ಚಿನ ಗಮನಹರಿಸಲಿದೆ. ಅಲ್ಲದೆ ಕೃಷಿ ಬೆಳವಣಿಗೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಬಲಪಡಿಸುವುದು ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಮಾರ್ಗಸೂಚಿಯನ್ನು ನಿಗದಿಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.ಕಾಂಗ್ರೆಸ್ ಪ್ರಣಾಳಿಕೆ ರಾಷ್ಟ್ರ ಎದುರಿಸುತ್ತಿರುವ ಪ್ರಮುಖ ಸವಾಲುಗಳನ್ನು ಪರಿಹರಿಸುವ ಗುರಿ ಹೊಂದಿರುವ ಶಕ್ತಿಯುತ” ದಾಖಲೆಯಾಗಿರುತ್ತದೆ ಎಂದು ರಾಹುಲ್ ಗಾಂಧಿ ವಿವರಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





