Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಪೊಲೀಸ್ ಅಧಿಕಾರಿಗಳ ಟ್ರಾನ್ಸ್​​ಫರ್​; ಚುನಾವಣಾ ಆಯೋಗದ ವಿರುದ್ಧ ‘ದೀದಿ’ ಕಿಡಿ…

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರ ಚುನಾವಣಾ ಆಯೋಗ ವರ್ಗಾವಣೆ ಮಾಡಿದ್ದಕ್ಕೆ ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಪಕ್ಷಪಾತ ಮಾಡುವ ಮೂಲಕ ಹಿರಿಯ ಅಧಿಕಾರಿಗಳನ್ನು ಟ್ರಾನ್ಸ್​ಫರ್ ಮಾಡಲಾಗಿದೆ. ಬಿಜೆಪಿ ಅಣತಿಯಂತೆ ಚುನಾವಣಾ ಆಯೋಗ ನಡೆದುಕೊಳ್ಳುತ್ತಿದೆ ಅಂತಾ ಆಯೋಗಕ್ಕೆ ಬರೆದ ಪತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಯೋಗದ ನಡವಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಂವಿಧಾನ ಬದ್ಧವಾಗಿ ಚುನಾವಣೆ ನಡೆಸಲು ಆಯೋಗ ಇದೆಯಾ ಅಥವಾ ಬಿಜೆಪಿ ಹೇಳಿದಂತೆ ನಡೆದುಕೊಳ್ತಿದ್ಯಾ ಅಂತಾ ಮಮತಾ ಪ್ರಶ್ನಿಸಿದ್ದಾರೆ. ಹಿರಿಯ ಅಧಿಕಾರಿಗಳ ಜಾಗಕ್ಕೆ ಬಂದಿರುವ ಬದಲಿ ಅಧಿಕಾರಿಗಳು ಹೊಸಬರಾಗಿದ್ದಾರೆ. ಹಾಗಾಗಿ ಅಕ್ರಮ ಹಣ ಹಾಗೂ ಮದ್ಯ ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸುವ ವೇಳೆ ಅವರು ಅಪಾಯಕ್ಕೆ ಸಿಲುಕುವ ಸಾಧ್ಯತೆಗಳಿವೆ ಅಂತಾ ಮಮತಾ ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಬಿಧಾನಗರ್ ಹಾಗೂ ಕೋಲ್ಕತ್ತಾದ ನಾಲ್ವರು ಆಯುಕ್ತರನ್ನು ವರ್ಗಾವಣೆ ಮಾಡಿ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಆದೇಶ ಹೊರಡಿಸಿತ್ತು.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *