ಕೊಪ್ಪಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೊಪ್ಪಳದ ಗಂಗಾವತಿಯಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಭತ್ತದ ನಾಡು ಗಂಗಾವತಿಗೆ ಆಗಮಿಸಲಿರುವ ಪ್ರಧಾನಿ ಮೋದಿ,ಶರಣಬಸವೇಶ್ವರ ಕ್ಯಾಂಪ್ ಬಳಿಯ ಕೃಷಿ ವಿಜ್ಞಾನ ಕೇಂದ್ರ ಎದುರುಗಡೆ ನಡೆಯಲಿರುವ ತ್ರಿವಳಿ (ಕೊಪ್ಪಳ, ರಾಯಚೂರು, ಬಳ್ಳಾರಿ) ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿದೆ.ಏಪ್ರಿಲ್ 9ರಂದು ಚಿತ್ರದುರ್ಗ, ಮೈಸೂರಿನಲ್ಲಿ ಅಬ್ಬರದ ಪ್ರಚಾರನಡೆಸಿದ್ದ ಮೋದಿ, ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರ ಮತಬೇಟೆ ನಡೆಸಲಿದ್ದಾರೆ. ಸುಮಾರು 30 ಎಕರೆ ಬೃಹತ್ ಪ್ರದೇಶದಲ್ಲಿ ನಡೆಯಲಿರುವ ಸಮಾವೇಷದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ..
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





