Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ರೈತ ಸ್ನೇಹಿ ಪ್ರಲ್ಹಾದ ಜೋಶಿಗೆ ಮತ ನೀಡಿ ಬಿಜೆಪಿ ಗೆಲ್ಲಿಸಿ: ಪಾಟೀಲ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಲೋಕಸಭಾ ಕ್ಷೇತ್ರದ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಜನನಾಯಕ ಪ್ರಲ್ಹಾದ ಜೋಶಿಯವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಮತ್ತೊಮ್ಮೆ ನರೇಂದ್ರ ಮೋದಿವರನ್ನು ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಲು ಎಲ್ಲರೂ ಬೆಂಬಲ ನೀಡಬೇಕೆಂದು ಕುಂದಗೋಳ ತಾಲೂಕಿನ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಬಾಬುಗೌಡ ಪಾಟೀಲ ಅವರು ಕರೆ ನೀಡಿದರು.ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ರೈತರ ಸಂಕಷ್ಟಕ್ಕೆ ಸ್ಪಂಧಿಸುವ ಜನನಾಯಕ ಪ್ರಲ್ಹಾದ ಜೋಶಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಕೇಂದ್ರ ಸರ್ಕಾರದಿಂದ ಹಲವಾರು ಯೋಜನೆಯನ್ನು ಧಾರವಾಡ ಜಿಲ್ಲೆಗೆ ತಂದಿದ್ದಾರೆ ಎಂದರು. ಕುಂದಗೋಳ ತಾಲೂಕಿನಲ್ಲಿರುವ ಬೆಣ್ಣಿಹಳ್ಳ ಸುಮಾರು ವರ್ಷಗಳಿಂದ ನೀರಿಲ್ಲದೇ ಬರಿದಾಗಿತ್ತು ಬೆಣ್ಣಿಹಳ್ಳಕ್ಕೆ ನೀರು ಹರಿಸುವ ಮೂಲಕ ರೈತರ ಸಂಕಷ್ಟಕ್ಕೆ ಸಹೃದಯತೆಯಿಂದ ಸ್ಪಂಧಿಸುವ ಮೂಲಕ ಜನಜನೀತರಾಗಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯ ಫಸಲ ಭೀಮಾ ಯೋಜನೆಯ ಪಲಾನುಭವಿಗಳಿದ್ದು, ರೈತರು ಫಸಲ ಭೀಮಾ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಪ್ರಲ್ಹಾದ ಜೋಶಿಯವರು ಮೂಲಕಾರಣರಾಗಿದ್ದಾರೆ. ಉತ್ತರ ಕರ್ನಾಟಕದ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಅಪ್ರತಿಮ ಜನನಾಯಕ ಪ್ರಲ್ಹಾದ ಜೋಶಿಯವರು. ಮೂರ ಭಾರಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಸದಾ ರೈತರ ಹಾಗೂ ಸಾರ್ವಜನಿಕರ ಅಭಿವೃದ್ಧಿಗೆ ದುಡಿದ್ದಿದ್ದಾರೆ ಅವರಿಗೆ ಧಾರವಾಡ ಲೋಕಸಭಾ ಮತ ಕ್ಷೇತ್ರದ ಜನತೆ ಆಶೀರ್ವಾದ ಮಾಡುವ ಮೂಲಕ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಂತೆ ಆಶೀರ್ವಾದ ಮಾಡಬೇಕು ಎಂದು ಅವರು ಹೇಳಿದರು. ಕೇಂದ್ರದಲ್ಲಿ ಹಲವಾರು ಬಿಕ್ಕಟ್ಟು ಎದುರಿಸುವ ಮೂಲಕ ನರೇಂದ್ರ ಮೋದಿಯವರು ದೇಶದ ಆರ್ಥಿಕತೆ,ಅಭಿವೃದ್ಧಿಗೆ ಕಂಕಣಬದ್ದರಾಗಿ ಶ್ರಮಿಸಿದ್ದಾರೆ.ಕೇಂದ್ರದಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯಾಗಿ ಮಾಡಿ ದೇಶದ ಅಭಿವೃದ್ಧಿಗೆ ಭದ್ರಬುನಾದಿ ಹಾಕುವ ಹರಿಕಾರರಾದ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಅವಕಾಶ ನೀಡಿ ದೇಶವನ್ನು ಉತ್ತುಂಗದ ಮಟ್ಟಕ್ಕೆ ಏರಿಸಲು ಜನತೆ ಸದಾ ಬೆಂಬಲ ನೀಡಬೇಕು. ಧಾರವಾಡ ಜಿಲ್ಲೆಯ ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕ ಅಭಿವೃದ್ಧಿ ನಮಗೆಲ್ಲ ಅವಶ್ಯಕವಾಗಿದೆ ಈ ಹಿನ್ನೆಲೆಯಲ್ಲಿ ನಾವೇಲ್ಲ ನಮ್ಮ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಪ್ರಲ್ಹಾದ ಜೋಶಿವರಿಗೆ ನಿಮ್ಮ ಅಮೂಲ್ಯ ಮತವನ್ನು ನೀಡಬೇಕು.ದೇಶದಲ್ಲಿ ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಹಲವಾರು ಯೋಜನೆಯನ್ನು ಮೋದಿ ಸರ್ಕಾರ ಜಾರಿಗೊಳಿಸಿದೆ ದೇಶದಲ್ಲಿಯೇ 500ಕ್ಕೂ ಹೆಚ್ಚು ಪಾಸಪೋರ್ಟ ಕೇಂದ್ರಗಳ ಪ್ರಾರಂಭ, 18000ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು, 100ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು, 17 IIIT ಹಾಗೂ 7 IIT ಅದರಲ್ಲಿ ಒಂದು ಧಾರವಾಡ ಜಿಲ್ಲೆಗೆ ನೀಡಿರುವುದು ಬಿಜೆಪಿ ಸರ್ಕಾರ. ಒಂದೇ ದೇಶ ಒಂದೇ ದರ ಎನ್ನುವಂತ ದೂರದೃಷ್ಟಿಯಿಂದ ಜಿಎಸ್‌ಟಿ ಜಾರಿ ಮಾಡಲಾಗಿದೆ ಇದು ವಿಶ್ವದ ಇನ್ನಿತರ ದೇಶಗಳಿಗೆ ಮಾದರಿಯಾಗಿದೆ . ಧಾರವಾಡ ಜಿಲ್ಲೆಗೆ ಜನಪರ ಅಭಿವೃದ್ಧಿಯನ್ನು ಜಾರಿ ಮಾಡಿರುವ ಗೌರವ ಭಾರತೀಯ ಜನತಾ ಪಾರ್ಟಿಗೆ ಸಲ್ಲುತ್ತದೆ.ಧಾರವಾಡ ಜಿಲ್ಲೆಯ ರಸ್ತೆ ಅಭಿವೃದ್ಧಿ, ಐಐಟಿ, ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಕೊಡುಗೆಯನ್ನು ನೀಡಲು ಪ್ರಲ್ಹಾದ ಜೋಶಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯು ಶ್ರಮಿಸಿದೆ.ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಧಾರವಾಡ ಲೋಕಸಭಾ ಅಭ್ಯರ್ಥಿಗೆ ತಮ್ಮ ಅಮೂಲ್ಯ ಮತವನ್ನು ನೀಡಬೇಕೆಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮುತ್ತು ಚಕಾರೆ, ಮಾರುತಿ ಕಲಘಟಗಿ, ಯಲ್ಲಪ್ಪ ಶಿಗ್ಗಾಂವ ಸೇರಿದಂತೆ ಇತರರು ಇದ್ದರು.

Share News

About Shaikh BIG TV NEWS, Hubballi

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *