Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ: ಹೊರಟ್ಟಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೇ ಬಿಜೆಪಿಯ ಶಾಸಕ ಅರವಿಂದ ಬೆಲ್ಲದ ಅವರು ಜಾತಿಯ ಕುರಿತಾಗಿ ಸಭೆ ನಡೆಸಿ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಬಗ್ಗೆ ಆಪಾಧನೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ಧರ್ಮದ ಹೋರಾಟದ ಅಸ್ತ್ರವನ್ನು ಹಿಡಿದು ಬಿಜೆಪಿಯವರು ರಾಜಕಾರಣ ಮಾಡುತ್ತಿರುವುದು ಖಂಡನೀಯವಾಗಿದೆ. ಅಲ್ಲದೇ ಮಠ ಮಾನ್ಯಗಳು ಎಲ್ಲರಿಗೂ ಸಮಾನವಾಗಿದೆ ಈ ಹಿನ್ನೆಲೆಯಲ್ಲಿ ಬಿಜೆಪಿಯವರು ಮೈತ್ರಿ ಪಕ್ಷದ ಕುರಿತು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಅವರು ಹೇಳಿದರು. ಪ್ರಲ್ಹಾದ ಜೋಶಿಯವರಿಂದ ಲಿಂಗಾಯತ ಧರ್ಮಕ್ಕೆ ಅನ್ಯಾಯವಾಗಿದೆ ಎಂಬುವಂತ ವಿನಯ ಕುಲಕರ್ಣಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಪಕ್ಷ ಲಿಂಗಾಯತ ಧರ್ಮವನ್ನು ತುಳಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದಕ್ಕೆ ವಿನಯ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ ವಿನಃ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷ ಜಾತ್ಯಾತೀತ ರಾಜಕೀಯ ಪಕ್ಷಗಳಾಗಿವೆ.ಧರ್ಮ ಹೋರಾಟವೇ ಬೇರೆ, ರಾಜಕೀಯವೇ ಬೇರೆ ಒಂದಕ್ಕೊಂದು ಸಂಬಂಧವಿಲ್ಲ ಎಂದು ಅವರು ಹೇಳಿದರು.ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಸಚಿವ ಸ್ಥಾನ ಸಿಗಬೇಕಿತ್ತು ಸಿಗಲಿಲ್ಲ ಅಲ್ಲದೇ ಸಭಾಪತಿ ಸ್ಥಾನ ಕೂಡ ಕೈ ತಪ್ಪಿದ್ದು ಸ್ವಲ್ಪಮಟ್ಟಿನ ಅಸಮಾಧಾನವಿದೆ ಎಂದರು. ಶಾಸಕ ಅರವಿಂದ ಬೆಲ್ಲದ ಅವರು ಲಿಂಗಾಯತ ಶಾಸಕರ ಸಭೆ ಕರೆದು ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಲೋಕಸಭಾ ಮೈತ್ರಿ ಅಭ್ಯರ್ಥಿ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುವುದನ್ನು ನಿಲ್ಲಿಸಬೇಕು.ಚುನಾವಣೆಗೆ ಹಾಗೂ ವಿರಶೈವ ಲಿಂಗಾಯತ ಧರ್ಮ ಹೋರಾಟಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದರು.ಕಾಂಗ್ರೇಸ್ ಎಐಸಿಸಿ ಸದಸ್ಯ ವೀರಣ್ಣ ಮತ್ತಿಕಟ್ಟಿ ಮಾತನಾಡಿ ಧರ್ಮ ಹೋರಾಟದ ಹೆಸರಿನಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದಿಂದ ಯಾವುದೇ ಲಿಂಗಾಯತರಿಗೆ ಅನ್ಯಾಯವಾಗಿಲ್ಲ ಎಂದರು.ಜೆಡಿಎಸ್ ಮುಖಂಡ ಗುರುರಾಜ ಹುಣಸಿಮರದ ಮಾತನಾಡಿ, ಲಿಂಗಾಯತ ಧರ್ಮ ಒಡೆಯುವಲ್ಲಿ ಪ್ರಲ್ಹಾದ ಜೋಶಿಯವರು ದೊಡ್ಡ ಮಟ್ಟದ ಅನ್ಯಾಯ ಮಾಡಿದ್ದಾರೆ.ಅಷ್ಟೇ ಅಲ್ಲದೇ ಬಿಜೆಪಿಯಲ್ಲಿ ಲಿಂಗಾಯತರಿಗೆ ಯಾವುದೇ ಕಿಂಚಿತ್ತೂ ಕಾಳಜಿ ಕೂಡ ತೋರಿಲ್ಲ. ಬಿಜೆಪಿಯವರು ತಮ್ಮ ಪಕ್ಷದ ಲಿಂಗಾಯತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಅವರು ಹೇಳಿದರು.ಬಳಿಕ ಮಾತನಾಡಿದ ನಾಗರಾಜ ಛಬ್ಬಿ, ಲಿಂಗಾಯತರು ಪ್ರತಿಯೊಬ್ಬ ಪಾರ್ಟಿಯಲ್ಲಿದ್ದಾರೆ‌.ಜಾತಿಯೇ ಬೇರೆ ಧರ್ಮ ಹೋರಾಟವೇ ಬೇರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಬಾಬುಗೌಡ ಪಾಟೀಲ, ನಾಗರಾಜ ಛಬ್ಬಿ, ರಾಜಣ್ಣ ಕೊರವಿ, ಬಂಗಾರೇಶ ಹಿರೇಮಠ ಸೇರಿದಂತೆ ಇತರರು ಇದ್ದರು.

Share News

About Shaikh BIG TV NEWS, Hubballi

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *