ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದಿದ್ದು, ಈ ಸಂದರ್ಭದಲ್ಲಿ ಯಾರೆಲ್ಲಾ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದಾರೋ ಅವರ ವಿರುದ್ಧ ಗೂಂಡಾ ಹಾಗೂ ಕೋಕಾ ಕಾಯಿದೆ ಜಾರಿಗೊಳಿಸುವುದಾಗಿ ಡಿಜಿ & ಐಜಿಪಿ ನೀಲಮಣಿ ಎನ್.ರಾಜು ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದಾರೋ ಅವರ ವಿರುದ್ಧ ಗೂಂಡಾ ಕಾಯ್ದೆ ತೆರೆಯಿರಿ ಎಂದು ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಡಿಜಿ & ಐಜಿಪಿ ಆದೇಶಿಸಿದ್ದಾರೆ.ಚುನಾವಣೆ ಬಳಿಕ, ಅತಿಹೆಚ್ಚು ಬೆಟ್ಟಿಂಗ್ ಮಂಡ್ಯದಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ, ಎಲ್ಲರ ವಿರುದ್ಧ ಗೂಂಡಾ ಕಾಯ್ದೆ ತೆರೆಯಲು ಚಿಂತನೆ ನಡೆಸಲಾಗಿದೆ. ಒಮ್ಮೆ ಈ ಕೋಕಾ ಕಾಯ್ದೆ ಅಥವಾ ಗೂಂಡಾ ಕಾಯ್ದೆ ಹಾಕಿದರೆ ಬಂಧಿತ ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರುಪಡಿಸುವ ಅಗತ್ಯವಿಲ್ಲ. ನೇರವಾಗಿ ಜೈಲಿಗೆ ಕಳುಹಿಸಬಹುದು. ಈ ಹಿನ್ನೆಲೆ ಬೆಟ್ಟಿಂಗ್ ತಡೆಯಲು ಡಿಜಿ & ಐಜಿಪಿ ಸೂಚನೆ ನೀಡಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





