ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಿದೆ. ಪ್ರೌಢಶಿಕ್ಷಣ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶವನ್ನು ಬಿಡುಗಡೆ ಮಾಡಿದರು.ಮಾರ್ಚ್ 22ರಿಂದ ಏಪ್ರಿಲ್ 4 ರವರೆಗೆ ನಡೆದಿದ್ದ 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ.ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯ ಎಲ್ಲಾ ಪ್ರಕ್ರಿಯೆಗಳು ಡಿಜಿಟಲೀಕರಣಗೊಳ್ಳುತ್ತಿರುವುದರಿಂದ ಶೀಘ್ರವಾಗೇ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಮೇ 2ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಮೊದಲು ನಿರ್ಧಾರವಾಗಿತ್ತು. ಆದರೆ, ದಿಢೀರ್ ಆಗಿ ದಿನಾಂಕ ಬದಲಾಗಿದೆ.ಅಧಿಕೃತ ವೆಬ್ಸೈಟ್ಗಳಲ್ಲಿ ಫಲಿತಾಂಶವು ಮಂಗಳವಾರ ಮಧ್ಯಾಹ್ನ 1 ಗಂಟೆಯ ವೇಳೆಗೆ ಲಭ್ಯವಾಗಲಿದ್ದು, ಮೇ 1ರಂದು ಶಾಲೆಗಳಲ್ಲಿ ಲಭ್ಯವಾಗಲಿದೆ.ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ http://kea.kar.nic.in ಹಾಗೂ http://kar.results.nic.in ಗೆ ಭೇಟಿ ನೀಡುವ ಮೂಲಕ ಫಲಿತಾಂಶಗಳನ್ನು ತಿಳಿದುಕೊಳ್ಳಬಹುದಾಗಿದೆ
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





