ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣಯಲಹಂಕದ ಕೋಗಿಲು ಕ್ರಾಸ್ ಬಳಿ ತಡರಾತ್ರಿ 12:30ರ ಸುಮಾರಿಗೆ ಆ್ಯಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಬೆಂಗಳೂರು: ನಗರದಲ್ಲಿ ಭಾನುವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಯಲಹಂಕದ ಕೋಗಿಲು ಕ್ರಾಸ್ ಬಳಿ ತಡರಾತ್ರಿ 12:30ರ ಸುಮಾರಿಗೆ ಆ್ಯಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ದೀಪಾಂಕ ಡೇ(46), ಸ್ವಾಗತಾ ಚೌಧರಿ(42), ಸುಜಯ್(45) ಜಯತಿ(65) ಹಾಗೂ ದೃವ ಡೇ(14) ಎಂದು ಗುರುತಿಸಲಾಗಿದ್ದು, ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಮೃತರೆಲ್ಲರೂ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಚೆನ್ನೈನಿಂದ ಬೆಂಗಳೂರಿಗೆ ಸಂಬಂಧಿಕರ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಯಲಹಂಕ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Share News

About Shaikh BIG TV NEWS, Hubballi

Check Also

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ …

Leave a Reply

Your email address will not be published. Required fields are marked *

You cannot copy content of this page