ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 7000 ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ, ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಪ್ಟ್ರಪತಿ ಹಾಗೂ ಪ್ರಧಾನಿ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.ಪ್ರಮುಖವಾಗಿ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ, ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್ ರಾಷ್ಟ್ರಗಳ ಗಣ್ಯರು ಸೇರಿದಂತೆ ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮೋದಿ ಅವರ ಪ್ರಮಣ ವಚನ ಈ ಬಾರಿ ಸಂಜೆ 7 ಗಂಟೆಗೆ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಅಲ್ಲದೇ ರಾಷ್ಟ್ರಪತಿ ಭವನದ ಫೋರ್ ಕೋರ್ಟಿನಲ್ಲಿ ಸಮಾರಂಭ ನಡೆಯಲಿದೆ.ಇತಿಹಾಸದಲ್ಲಿ ಇದುವರೆಗೂ 3 ಬಾರಿ ಮಾತ್ರ ಫೋರ್ ಕೋರ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಈ ಹಿಂದೆ ಮಾಜಿ ಪ್ರಧಾನಿಗಳಾದ ಚಂದ್ರಶೇಖರ್ (1990), ವಾಜಪೇಯಿ (1998), 2014 ರಲ್ಲಿ ಮೋದಿ ಅವರು ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಉಳಿದ ಪ್ರಧಾನಿಗಳು ದರ್ಬಾರ್ ಹಾಲ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಲ್ಲಿ ಕೇವಲ 500 ಜನರಿಗೆ ಮಾತ್ರ ಆಸನ ವ್ಯವಸ್ಥೆ ಇದ್ದು, ಪರಿಣಾಮ ಘೋರ್ ಕೋರ್ಟಿನಲ್ಲಿ ಕಾರ್ಯಕ್ರಮ ನಡೆಯಲಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





