ಬೆಂಗಳೂರು : ರಾಜಧಾನಿ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆಗೆ ತುತ್ತಾಗಿದೆ. ಈ ಬಾರಿ ಜೂನ್‌ನಲ್ಲಿ ಮುಂಗಾರು ಮಳೆ ದುರ್ಬಲಗೊಂಡರೆ ಮುಂದಿನ ದಿನಗಳಲ್ಲಿ ಈ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವುದು ಸಾಧ್ಯತೆಗಳು ಹೆಚ್ಚಿವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಜೂನ್‌ನಲ್ಲಿ ಕೆಎಆರ್‌ಎಸ್‌ನಿಂದ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಈ ಪ್ರಕಾರ ನೀರು ಬಿಡುಗಡೆ ಮಾಡಿದರೆ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಲಿದೆ. ಪ್ರಸ್ತುತ ಕೆಆರ್‌ಎಸ್ ಜಲಾಶಯದಲ್ಲಿ 11 ಟಿಎಂಸಿ ನೀರು ಲಭ್ಯವಿದ್ದು, ಈ ಪೈಕಿ 7 ಟಿಎಂಸಿ ಮಾತ್ರ ಕುಡಿಯಲು ಬಳಕೆ ಮಾಡಬಹುದು. ರಾಜ್ಯ ಸರ್ಕಾರವು ಬೆಂಗಳೂರು ನಗರಕ್ಕೆ ಕುಡಿಯಲು ವಾರ್ಷಿಕ 19 ಟಿಎಂಸಿ ನೀರು ನಿಗದಿಗೊಳಿಸಿದೆ. ಈ ಪ್ರಕಾರ ಪ್ರತಿ ತಿಂಗಳು 1.5 ಟಿಎಂಸಿ ನೀರು ಸಿಗುತ್ತಿದೆ.ಪ್ರಸ್ತುತ ಜಲಾಶಯದಲ್ಲಿ 11 ಟಿಎಂಸಿ ನೀರು ಇದ್ದರೂ 4 ಟಿಎಂಸಿ ಡೆಡ್ ಸ್ಟೋರೇಜ್ ಕಳೆದು ಬಳಕೆಗೆ 7 ಟಿಎಂಸಿ ಮಾತ್ರ ಲಭ್ಯವಾಗುತ್ತದೆ. ಈ ನೀರನ್ನು ಮುಂದಿನ ನಾಲ್ಕು ತಿಂಗಳು ಬೆಂಗಳೂರು ನಗರಕ್ಕೆ ಪೂರೈಕೆ ಮಾಡಬಹುದು. ಒಂದು ವೇಳೆ ಜೂನ್‌ನಲ್ಲಿ ಉತ್ತಮ ಮುಂಗಾರು ಮಳೆಯಾಗಿ ಒಳಹರಿವು ಹೆಚ್ಚಾದರೆ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಮುಂಗಾರು ದುರ್ಬಲವಾದರೆ ನೀರಿನ ಸಮಸ್ಯೆ ಉಂಟಾಗುವುದು ಖಚಿತ. ಹಾಗಾಗಿ ಬೆಂಗಳೂರು ಕುಡಿಯುವ ನೀರು ಪೂರೈಕೆ ಮುಂಗಾರು ಮಳೆಯನ್ನೇ ಅವಲಂಭಿಸಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





