ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ರಾತ್ರಿ ಮೋಂಬತ್ತಿ ಮೆರವಣಿಗೆ ನಡೆಯಿತು .ವೈದ್ಯರು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು . ವೈದ್ಯರ ಮೇಲಿನ ಹಿಂಸೆ ಖಂಡನೀಯ .ರಾಜ್ಯ ಹಾಗೂ ಕೇಂದ್ರ ಸರಕಾರಗಳು ವೈದ್ಯರಿಗೆ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಘಟಕದ ಸ್ಥಾಪಕಾಧ್ಯಕ್ಷ ಡಾ. ಕೆ.ವಿ ಚಿದಾನಂದ ಒತ್ತಾಯಿಸಿದರು .ಪ್ರತಿಭಟನೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಘಟಕದ ಅಧ್ಯಕ್ಷೆ ಡಾ.ಗೀತಾ ಡಾ ಭಾರತಿ ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news





