Breaking News

ಬಲಿಯಾಯಿಗೆ ದ್ವೇಷಕ್ಕೆ ಆ ಜೀವ…!

ವ್ಯಕ್ತಿಯ ಬರ್ಬರ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ. ದಯಾನತ್ ಖಾನ್ (20)ಕೊಲೆಯಾದ ವ್ಯಕ್ತಿ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ದುರ್ಗಿಗುಡಿ ನಿವಾಸಿ ಹಾಗೂ ವ್ಯಕ್ತಿ ಗ್ಯಾರೇಜ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಳೆದ ಒಂದು ವರ್ಷದಿಂದ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯ ಬಾಷಾಸಾಬ್ ಎಂಬುವರ ಮಗಳನ್ನು ಪ್ರೀತಿ ಮಾಡುತ್ತಿದ್ದ. ಇದೇ ಕಾರಣಕ್ಕೆ ಕಳೆದ ಮೂರುದಿನಗ ಹಿಂದೆ ಬಾಷಾಸಾಬ್ ನಮ್ಮ ಮನೆಗೆ ಬಂದು ನಮ್ಮ ಮಗಳನ್ನು ಪ್ರೀತಿ ಮಾಡಲು ಬಿಡಲ್ಲ ಎಂದು ಅವಾಜ್ ಹಾಕಿದ್ದ ಇದರ ಪರಿಣಾಮವಾಗಿ ನನ್ನ ಮಗನನ್ನು ಕೊಲೆ ಮಾಡಲಾಗಿದೆ ಎಂದು ಕೊಲೆಯಾದ ವ್ಯಕ್ತಿಯ ತಂದೆ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗ ಆಹಿಲ್ ಸೆಂಟರ್ ನ ಮಾಲಿಕ ಮಗನಾದ ಶಾಹಿದ್ ಜೊತೆ ಜಗಳವಾಗಿತ್ತು ,ಇವರಿಬ್ಬರೆ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಕೊಲೆಯಾದ ವ್ಯಕ್ತಿಯ ತಂದೆ ಆರೋಪಿಸಿದ್ದು, ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About karibasvaraja BIG TV NEWS, Davanagere

Check Also

ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ : ಹೆತ್ತ ತಾಯಿಯ ಕತ್ತು ಸೀಳಿ ಕೊಂದ ಪಾಪಿ ಮಗ.!

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಬೆಂಗಳೂರು …

Leave a Reply

Your email address will not be published. Required fields are marked *