Breaking News

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದ ಘಟನೆ ಕೋಲಾರದ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿ ನಡೆದಿದೆ. ಮನೆಯಲ್ಲಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಸ್.ನಾಗಪ್ರಕಾಶ್ (೫೮) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಶೋಭ, ಸ್ವರೂಪ್ ಹಾಗೂ ಸತ್ಯನಾರಾಯಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದು, ಶೋಭ ಎಂಬುವವರಿಗೆ ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ೫ ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Share News

About ramu BIG TV NEWS, Kolar

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *