Breaking News

ನೀರಿನ ದಾಹ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ದುರ್ಮರಣ,

ನೀರಿನ ದಾಹ ತೀರಿಸಿಕೊಳ್ಳಲು ಹೋಗಿ ವ್ಯಕ್ತಿ ದುರ್ಮರಣ ಹೊಂದಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದ ಹೊರವಲಯದ ಗೊಂದಳೆ ತೋಟದಲ್ಲಿ ನಡೆದಿದೆ. ಕುಡಿಯಲು ನೀರು ತರಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಮಲ್ಲಿಕಾರ್ಜುನ್ ಐಗಳಿ(೩೩) ಎಂಬಾತ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ಮಲ್ಲಿಕಾರ್ಜುನ್ ಯಕ್ಕಂಚಿ ಗ್ರಾಮದ ನಿವಾಸಿ, ಯಕ್ಕಂಚಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಬರ ಹಿನ್ನೆಲೆ ಕೃಷಿ ಹೊಂಡಕ್ಕೆ ತೆರಳಿದ್ದ ಮಲ್ಲಿಕಾರ್ಜುನ್, ನೀರು ತರುವಾಗಲೇ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ನೀರಿನ ವ್ಯವಸ್ಥೆ ಸರಿಯಾಗಿ ಮಾಡದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About Prakash s kamble BIG TV NEWS, Athani

Check Also

ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ …

Leave a Reply

Your email address will not be published. Required fields are marked *