Breaking News
Hiring Reporter’s For more Information Contact Above Number 876 225 4007 . Program producer
Home / Breaking News / ನಾಳೆಯಿಂದ ಭಾರತ – ಇಂಗ್ಲೆಂಡ್ ಟೆಸ್ಟ್.

ನಾಳೆಯಿಂದ ಭಾರತ – ಇಂಗ್ಲೆಂಡ್ ಟೆಸ್ಟ್.

ಬೆಂಗಳೂರು (ಫೆ. 04): ಸರಿಸುಮಾರು ಒಂದು ವರ್ಷದ ಬಳಿಕ ಭಾರತದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟಕ್ಕೆ ವೇದಿಕೆ ಸಜ್ಜಾಗಿದೆ. ನಾಳೆ ಫೆಬ್ರವರಿ 5 ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವೆ ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್​ ಪಂದ್ಯ ಆರಂಭವಾಗಲಿದೆ. ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೇರಲು ಉಭಯ ತಂಡಗಳಿಗೆ ಈ ಟೆಸ್ಟ್​ ಸರಣಿ ಮುಖ್ಯವಾಗಿದೆ. ಹೀಗಾಗಿ ನಾಲ್ಕು ಪಂದ್ಯಗಳ ಟೆಸ್ಟ್​ ಸರಣಿ ಮೇಲೆ ಎಲ್ಲರ ಕಣ್ಣಿದೆ. ಇದರ ಜೊತೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆರ್. ಅಶ್ವಿನ್, ಇಂಗ್ಲೆಂಡ್ ನಾಯಕ ಜೋ ರೂಟ್ ಸೇರಿದಂತೆ ಉಭಯ ತಂಡದ ಕೆಲ ಆಟಗಾರರು ನೂತನ ದಾಖಲೆಯ ಹೊಸ್ತಿಲಲ್ಲಿದ್ದಾರೆ.

ವಿಶ್ವದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ: ಹೌದು ನಾಯಕನಾಗಿ ವಿರಾಟ್ ಕೊಹ್ಲಿ ವಿಶ್ವದಾಖಲೆಯೊಂದರ ಹೊಸ್ತಿಲಲ್ಲಿದ್ದಾರೆ.

ಕೊಹ್ಲಿ ಬ್ಯಾಟ್​ನಿಂದ ಇನ್ನೊಂದೇ ಒಂದು ಶತಕ ಸಿಡಿದರೆ, ನಾಯಕನಾಗಿ ಗರಿಷ್ಠ 42ನೇ ಶತಕ ಗಳಿಸಲಿದ್ದಾರೆ. ಇದು ವಿಶ್ವದಾಖಲೆಯಾಗಲಿದೆ. ಪ್ರಸ್ತುತ 41 ಶತಕ ಬಾರಿಸಿರುವ ಕೊಹ್ಲಿ, ಆಸ್ಟ್ರೇಲಿಯದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಜೊತೆಗೆ ಸಮಬಲ ಸಾಧಿಸಿದ್ದಾರೆ. ನಾಯಕನಾಗಿ ಒಟ್ಟು 33 ಶತಕ ಬಾರಿಸಿರುವ ದ. ಆಫ್ರಿಕಾದ ಮಾಜಿ ನಾಯಕ ಗ್ರೇಮ್‌ ಸ್ಮಿತ್‌ 2ನೇ ಸ್ಥಾನದಲ್ಲಿದ್ದಾರೆ.

Share

About Admin BIG TV NEWS

Check Also

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ ಮೂವರ ಬಂಧನ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ …

Leave a Reply

Your email address will not be published. Required fields are marked *

error: Content is protected !!