Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕೋವಿಡ್ ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷರ ಜೊತೆ ಗೃಹ ಸಚಿವ

ಕೋವಿಡ್ ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷರ ಜೊತೆ ಗೃಹ ಸಚಿವ

ಇದುವರೆಗೆ ಕೋವಿಡ್ ಕುರಿತು ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜತೆ ಸಂವಾದ ನಡೆಸುತ್ತಿದ್ದ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಬಿಂದು ವಿನೂತನ ಕಾರ್ಯಕ್ರಮಕ್ಕೆ ನಾಂದಿ ಹಾಡಿದರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ 12 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಜತೆ ಕೋವಿಡ್ ಸ್ಥಿತಿಗತಿ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.‌

ಇದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಭದ್ರ ಬುನಾದಿ ಹಾಕಿದರು ಶಿಗ್ಗಾವಿ ತಾಲೂಕಿನ ತಡಸ, ಕುನ್ನೂರು, ದುಂಡಸಿ, ಹೊಸೂರು, ಚಂದಾಪುರ, ಅಂದಲಗಿ, ಹಿರೇಬೆಂಡಿಗೇರಿ, ಬನ್ನೂರು ಕಬನೂರು, ಬಸವನಾಳ, ಕ್ಯಾಲಕೊಂಡ, ಅತ್ತಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವಿಡಿಯೋ ಕಾನ್ಫರೆನ್ಸ್ ದಲ್ಲಿ ಭಾಗವಹಿಸಿ ಹಲವಾರು ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದರು. ಅವುಗಳನ ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿದರು.‌

ಶಿಗ್ಗಾವಿ ತಾಲೂಕಿನಲ್ಲಿರುವ ಕೋವಿಡ್ ಸೋಂಕಿತರ ಮನೆಮನೆಗೆ ತೆರಳಿ ಆಹಾರದ ಕಿಟ್ ಗಳನ್ನು ವಿತರಣೆ ಮಾಡುವಂತೆ ಗೃಹ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದರು.

ಸೋಂಕಿತರ ಮನೆಯಲ್ಲಿ ಹಲವಾರು ಸಮಸ್ಯೆಗಳಿರುತ್ತವೆ.‌ ಸೋಂಕಿತರು ಹೋಂ ಐಸೋಲೇಷನ್ ನಲ್ಲಿ ಇದ್ದರೆ ಸಮಸ್ಯೆಗಳು ಇನ್ನಷ್ಟು ಜಾಸ್ತಿ. ಹೀಗಾಗಿ ಸೋಂಕಿತರ ಮನೆಗೆ ತೆರಳಿ ಅಕ್ಕಿ, ಬೇಳೆ, ಬೆಲ್ಲ, ಅಡುಗೆ ಎಣ್ಣೆ, ಖಾರ, ಮಸಾಲೆ ಪೌಡರ್ ಸೇರಿದಂತೆ ಇತರೆ ಪದಾರ್ಥಗಳ ಕಿಟ್ಟನ್ನು ವಿತರಣೆ ಮಾಡಬೇಕು.‌ ಇದಕ್ಕೆ ತಗುಲುವ ವೆಚ್ಚವನ್ನು ಎಸ್ ಡಿ ಆರ್ ಎಫ್ ನಿಧಿಯಿಂದ ಬಳಕೆ ಮಾಡಬೇಕೆಂದು ಶಿಗ್ಗಾವಿ ತಹಸೀಲ್ದಾರರಿಗೆ ಸೂಚಿಸಿದರು.

ಮನೆಯಲ್ಲಿರುವ ಸೋಂಕಿತರ ಬಗ್ಗೆ ಹೆಚ್ಚು ಕಾಳಜಿವಹಿಸಿ. ಅವರ ಆರೋಗ್ಯ ತಪಾಸಣೆ ಮಾಡಿ. ಸೋಂಕಿತರಲ್ಲಿ ಸಮಸ್ಯೆ ಹೆಚ್ಚಾಗುವ ಲಕ್ಷಣಗಳು ಕಂಡು ಬಂದರೆ ಅಂತವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಿ. ಗ್ರಾಮಗಳಲ್ಲಿ‌ ಮಿನಿ ಕಂಟೇನ್ಮೆಂಟ್ ಜೋನಗಳನ್ನು ಮಾಡಿ. ಅದರ ಸುತ್ತ ಬ್ಯಾರಿಕೇಡ್ ಗಳನ್ನು ಹಾಕಿ. ಸೋಂಕಿತ ಮಹಿಳೆಯರಿಗೆ ಮಹಿಳಾ ವೈದ್ಯರಿಂದಲೇ ತಪಾಸಣೆಗೆ ವ್ಯವಸ್ಥೆ ಮಾಡಿ. ಆಶಾ ಕಾರ್ಯಕರ್ತೆಯರಿಗೆ ಪಿಪಿಇ ಕಿಟ್, ಮಾಸ್ಕ್ ಹ್ಯಾಂಡ್ ಗ್ಲೌಸ್ ಸ್ಯಾನಿಟೈಸರ್ ಒದಗಿಸಿ ಎಂದು ಸಚಿವರು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳನ್ನು ಕಾರ್ಯಪಡೆಗೆ ಜೋಡಣೆ ಮಾಡಿ. ಪ್ರಾಥಮಿಕ ಸಂಪರ್ಕಿತ ರನ್ನು ಆರ್ಟಿಪಿಸಿಆರ್ ತಪಾಸಣೆಗೆ ಒಳಪಡಿಸಿ. ದ್ವಿತೀಯ ಸಂಪರ್ಕಿತ ರನ್ನು ರಾಪಿಡ್ ಆಂಟಿಜನ್ ಟೆಸ್ಟಿಗೆ ಒಳಪಡಿಸಿ ಎಂದು ಸಚಿವರು ಸೂಚಿಸಿದರು.‌

Share

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ ಮೂವರ ಬಂಧನ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ …

Leave a Reply

Your email address will not be published. Required fields are marked *

error: Content is protected !!