Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರೈತನಿಗೆ ಕಾರವಾದ ಮೆಣಸಿನಕಾಯಿ

ರೈತನಿಗೆ ಕಾರವಾದ ಮೆಣಸಿನಕಾಯಿ

ಧಾರವಾಡ: ಲಾಕಡೌನ್ ಹಿನ್ನೆಲೆಯಲ್ಲಿ ಮೆಣಸಿನಕಾಯಿ ದರ ಕುಸಿತಗೊಂಡಿದ್ದು, ಅದನ್ನು ಬೆಳೆದ ರೈತ ಇದೀಗ ಕಣ್ಣೀರು ಹಾಕುವಂತಾಗಿದೆ.
ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತನೋರ್ವ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನೇ ನಾಶಪಡಿಸಿದ್ದಾನೆ.

ಹೀಗೆ ಮೆಣಸಿನಕಾಯಿ ಬೆಳೆಯನ್ನು ರೋಟರ್ ನಿಂದ ನಾಶಪಡಿಸುತ್ತಿರುವ ರೈತನ ಹೆಸರು ಅಜ್ಜಪ್ಪ. ತನ್ನ 3 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಆದರೆ, ಪ್ರಸಕ್ತ ಕೊರೊನಾದಿಂದಾಗಿ ಲಾಕಡೌನ್ ಆಗಿದ್ದು, ಪ್ರತಿ ಕೆಜಿ

ಮೆಣಸಿನಕಾಯಿಗೆ 5 ರೂಪಾಯಿ ಮಾತ್ರ ಬೆಲೆ ಸಿಗುತ್ತಿದೆ. ಮಾರುಕಟ್ಟೆಯಲ್ಲಿ ಮೆಣಸಿನಕಾಯಿಯನ್ನು ಯಾರೂ ಕೇಳದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸುಮಾರು 25 ಸಾವಿರಕ್ಕಿಂತಲೂ ಹೆಚ್ಚು ಖರ್ಚು ಮಾಡಿದ ರೈತ, ತನಗೆ ಲಾಭ ಬರದೇ ಇರುವುದರಿಂದ ಇಡೀ ಹೊಲದಲ್ಲಿನ ಮೆಣಸಿನಕಾಯಿ ಬೆಳೆಯನ್ನು ನಾಶಪಡಿಸಿದ್ದಾನೆ.

ಲಾಕಡೌನ್ ಹಿನ್ನೆಲೆ ಸಾಕಷ್ಟು ರೈತರ ಸಂಕಷ್ಟಕ್ಕೀಡಾಗಿದ್ದಾರೆ. ತೋಟಗಾರಿಕಾ ಬೆಳೆಗಳಿಗೆ ಬೆಲೆ ಸಿಗದೇ ಅನಿವಾರ್ಯವಾಗಿ ಅವುಗಳನ್ನು ನಾಶಪಡಿಸುತ್ತಿದ್ದಾರೆ. ಅಮ್ಮಿನಬಾವಿ ಗ್ರಾಮದಲ್ಲಿ ಸುಮಾರು 10 ಕ್ಕೂ ಹೆಚ್ಚು ರೈತರು ತೋಟಗಾರಿಕಾ ಬೆಳೆಯನ್ನು ನಾಶಪಡಿಸಿದ್ದಾರೆ.

Share

About Shaikh BIG TV NEWS, Hubballi

Check Also

ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ‌ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ….

ಹುಬ್ಬಳ್ಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ. ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರು, ನಗರದ ಸರ್ಕ್ಯೂಟ್ ಹೌಸ್ ನಲ್ಲಿ …

Leave a Reply

Your email address will not be published. Required fields are marked *

error: Content is protected !!