ಹುಬ್ಬಳ್ಳಿ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆ ಇಂದು ಹುಬ್ಬಳ್ಳಿ ಕಲಾವಿದರ ತಂಡವೊಂದು ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಕೋರಿದರು.
ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಶಾಲೆ ವೃತ್ತದಲ್ಲಿ ಭಜನೆ ಮಾಡುವ ಮೂಲಕ ವಿಭಿನ್ನವಾಗಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು. ಪುನೀತ್ ರಾಜಕುಮಾರ್ ಅವರ ಬಾಂಧವ್ಯ ಸ್ಮರಿಸಿ ಭಾವುಕರಾದರು.ಅಲ್ಲದೆ, ಹುಬ್ಬಳ್ಳಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘಟನೆಯಿಂದ ತೆರೆದ ಆಟೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರ ಮೆರವಣಿಗೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಚೆನ್ನಮ್ಮ ವೃತ್ತದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುನೀತ್ ಆತ್ಮಕ್ಕೆ ಶಾಂತಿ ಕೋರಿದರು. ಮೆರವಣಿಗೆ ಉದ್ದಕ್ಕೂ ಅಪ್ಪು ಪರ ಘೋಷಣೆ ಕೂಗಿ ನಟನ ಅಗಲಿಕೆಗೆ ಕಂಬನಿ ಮಿಡಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news

