ಹುಬ್ಬಳ್ಳಿ: ಇಲ್ಲಿನ ತೋಳನಕೆರೆ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿತರಿಂದ 75 ಗ್ರಾಂ ಗಾಂಜಾ, ಗಾಂಜಾ ಸೇವನೆಗೆ ಬಳಸುತ್ತಿದ್ದ ವಸ್ತುಗಳು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ರಬಕವಿಯ ದಾದಾ ಎಂಬಾತನ ಬಳಿ ಗಾಂಜಾ ಖರೀದಿಸಿದ್ದ ಯುವಕರು, ತೋಳನಕೆರೆಗೆ ಬಳಿ ಸೇವಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.
ಗಾಂಜಾ ಮಾರಾಟಗಾರ ದಾದಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ ಎಂಬ ಕಳವಳಕಾರಿ ಅಂಶ ಗೊತ್ತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

