Breaking News

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ವಿಜಯಪುರ : ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ನಡೆದಿದೆ.

ಹೌದು ಬಿಜೆಪಿ ಕಾರ್ಯಕರ್ತ ಗುರುಗೌಡ ಬಿರಾದಾರ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು , ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದಾರೆ , ಗುರುಗೌಡ ತಮ್ಮ ಹೋಲಕ್ಕೆ ನೀರು ಬಿಡಲುತೆರಳಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾರೆ.

ಅಪರಿಚಿತರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಹಲ್ಲೆಗೈದು ಪರಾರಿಯಾಗಿದ್ದಾರೆ. ಗುರುಗೌಡನಿಗೆ ಕತ್ತು ಮತ್ತು ಕಾಲಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ , ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About admin

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *