
ಹುಬ್ಬಳ್ಳಿ: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆಯಾಗಿರುವ ಘಟನೆ ಸುಳ್ಳದ ರಸ್ತೆಯ ತ್ರಿಬಿ ಹೋಟೆಲ್ ಮುಂಭಾಗದಲ್ಲಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.ಮಹಾನಗರ ಪಾಲಿಕೆಯವರು ಒಳಚರಂಡಿ ದುರಸ್ತಿ ಕಾರ್ಯ ಕೈಗೊಂಡ ಸಂದರ್ಭದಲ್ಲಿ ಜೆಸಿಬಿಯಿಂದ ಅಂದಾಜು 4.5 ಅಡಿ ಆಳದಲ್ಲಿ ಅಗೆಯುವಾಗ ಗ್ಯಾಸ್ ಪೈಪ್ಗೆ ತಾಗಿ ಒಡೆದು ಹೋಗಿದೆ. ಪೈಪ್ ಒಡೆದಿದ್ದರಿಂದ ಅನಿಲ ಸೋರಿಕೆಯಾಗುತ್ತಿದೆ.
ಕೂಡಲೇ ಸ್ಥಳೀಯರು ಪೋಲಿಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ, ಈವರೆಗೆ ಯಾರೂ ಕೂಡ ಸ್ಥಳಕ್ಕೆ ಆಗಮಿಸಿಲ್ಲ. ಅನಿಲ ಸೋರಿಕೆಯಿಂದ ಅಕ್ಕ-ಪಕ್ಕದ ಮನೆಯವರಲ್ಲಿ ಆತಂಕ ಸೃಷ್ಟಿಯಾಗಿದೆ.ಇನ್ನು, ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ ಆಗುತ್ತಿರುವ ವಿಡಿಯೋ ವೈರಲ್ ಆಗಿದೆ. ಗ್ಯಾಸ್ ಪೈಪ್‌ಲೈನ್ ಹಾನಿಯಾದ ಹಿನ್ನೆಲೆ ಇನ್ನಷ್ಟು ಆಳದಲ್ಲಿ ಪೈಪ್‌ಲೈನ್ ಅಳವಡಿಕೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





