
ಹುಬ್ಬಳ್ಳಿ : ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತ್ಯೋತ್ಸವವನ್ನು ನಗರದ ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ್,
ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಕಛೇರಿಯಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿ ಆಚರಿಸಲಾಗುತ್ತಿದೆ ಎಂದ ಅವರು ಮುಂದಿನ ದಿನಗಳಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿಯನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರಿ ಜಯಂತಿಯನ್ನಾಗಿ ಆಚರಿಸುವಂತಾಗಬೇಕು ಹಾಗೂ ಜಯಂತಿ ಅಂಗವಾಗಿ ಸರ್ಕಾರಿ ರಜೆಯನ್ನು ಘೋಷಣೆ ಮಾಡಬೇಕೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಾಜಿ ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ ಪರಮೇಶ್ವರ್, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಕೆಪಿಸಿಸಿ ಸಂಯೋಜಕ ಹಾಗೂ ಹಿಂದುಳಿದ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಅನಿಲಕುಮಾರ್ ಪಾಟೀಲ್, ಧುರೀಣರಾದ ಸತೀಶ್ ಮೆಹರವಾಡೆ ಜಿಲ್ಲಾಧ್ಯಕ್ಷ ಪ್ರಕಾಶ ಬುರಬುರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪದಗ್ರಹಣ ಸ್ವೀಕರಿಸಿದ ಪ್ರಕಾಶ ಬುರಬುರೆ ಅವರಿಗೆ ಮುಖಂಡರು ಸನ್ಮಾನಿಸಿ, ಗೌರವಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

