Breaking News

ಬಸವರಾಜದ ಯತ್ನಾಳ ಅಪಪ್ರಚಾರ ಖಂಡಿಸಿ ಪ್ರತಿಭಟನೆ-ಬಿಜೆಪಿ ಶಾಸಕರ ಪ್ರತಿಕೃತಿ ದಹಿಸಿ ಆಕ್ರೋಶ

ಕಲಬುರಗಿ: ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಲಿತ ವಿರೋಧಿ ಎಂದು ಬಿಜೆಪಿ ಸುಳ್ಳು ಹೇಳುತ್ತಾ ಅಪಪ್ರಚಾರ ಮಾಡುತ್ತಿರುವದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿಭಾಗದಿಂದ ಬಿಜೆಪಿ ಶಾಸಕರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ನಗರ ಅನ್ನಪೂರ್ಣ ಕ್ರಾಸ್ ಹತ್ತಿರ ಬಿಜೆಪಿ ಶಾಸಕ ಬಸವರಾಜ್ ಪಾಟೀಲ್ ಮತ್ತಿಮೂಡ್, ರಾಜಕುಮಾರ್ ಪಾಟೀಲ್ ತೇಲ್ಕೂರು, ಬಸವನಗೌಡ ಪಾಟೀಲ್ ಯತ್ನಾಳ್, ಅನಂತಕುಮಾರ್ ಹೆಗ್ಗಡೆ ಅವರ ಪ್ರತಿಕೃತಿ ದಹಿಸಿ ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಘೋಷಣೆ ಕುಗ್ಗಿ ಅಸಮಧಾನ ಹೊರಹಾಕಿದರು.

ಈ ಸಂದರ್ಭದಲ್ಲಿ ಅಫಜಲಪುರ ಶಾಸಕ ಎಂ.ವೈ ಪಾಟೀಲ್, ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷ ಜಗದೇವ್ ಗುತ್ತೇದಾರ್, ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಸೇರಿದಂತೆ ಎಲ್ಲಾ ಮೋರ್ಚಾಗಳ ಮುಖಂಡರು ಇದ್ದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *