Breaking News

ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಆರೋಪ; ವೈದ್ಯನನ್ನು ಬಂಧಿಸಿದ ಪೊಲೀಸ್

ಬೆಂಗಳೂರು: ಆಟೋ ಚಾಲಕನ ಮೇಲೆ ವೈದ್ಯರ ತಂಡದಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಯಲಹಂಕ ನಿವಾಸಿ 26 ವರ್ಷದ ಮುರುಳಿ ಹಲ್ಲೆಗೊಳಗಾದ ಆಟೋ ಚಾಲಕ. ಸದ್ಯ ಚಾಲಕ ನೀಡಿದ‌ ದೂರಿನ ಮೇರೆಗೆ ಖಾಸಗಿ ಆಸ್ಪತ್ರೆಯೊಂದರ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ವೈದ್ಯರು ಪಾರ್ಟಿ ಮಾಡುತ್ತಿದ್ದರು. ಅದೇ ಹೋಟೆಲ್ಗೆ ಅಡುಗೆ ವಸ್ತುಗಳನ್ನು ಸಾಗಿಸಲು ಆಟೋ ಚಾಲಕ ಹೋಟೆಲ್ಗೆ ಹೋಗಿದ್ದ. ಈ ವೇಳೆ ಪಾರ್ಟಿ ಮಾಡುತ್ತಿದ್ದ ವೈದ್ಯರು ತಮ್ಮ ಮತ್ತೊಬ್ಬ ವೈದ್ಯ ಸ್ನೇಹಿತನನ್ನು ಆಟೋದಲ್ಲಿ ಕರೆದುಕೊಂಡು ಬರುವಂತೆ ಹೇಳಿದ್ರು. ಆದ್ರೆ ಆಟೋ ಚಾಲಕ ಇದಕ್ಕೆ ಒಪ್ಪಿರಲಿಲ್ಲ. ಇದೇ ವಿಚಾರ ಸಂಬಂಧ ವೈದ್ಯರ ಗುಂಪು ಆಟೋ ಚಾಲಕನ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಲಾಗಿದೆ ಎಂದು ಚಾಲಕ ಆರೋಪ ಮಾಡಿದ್ದಾನೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *